TSK

TSK · ಪ್ರಲಾಪಗಳು 2:20

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು, “ಯೆಹೋವನೇ ನೀನು ಮಹಾ ಶಕ್ತಿಯಿಂದಲೂ, ಭುಜಬಲದಿಂದಲೂ ಐಗುಪ್ತ ದೇಶದಿಂದ ಹೊರಗೆ ಕರೆತಂದ ನಿನ್ನ ಪ್ರಜೆಗಳ ಮೇಲೆ ಕೋಪದಿಂದುರಿಯುವುದೇತಕೆ?

ನಾನು ಆತನನ್ನು ಬೇಡಿಕೊಳ್ಳುತ್ತಾ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹಿಮೆಯಿಂದ ರಕ್ಷಿಸಿ ನಿನ್ನ ಭುಜಬಲದಿಂದ ಐಗುಪ್ತ್ಯರಿಂದ ಬಿಡುಗಡೆಮಾಡಿದ ನಿನ್ನ ಸ್ವಕೀಯ ಜನರನ್ನು ನಾಶಮಾಡಬೇಡ.

“ನಿನಗಿರುವ ದುಃಖ ಯಾವುದು” ಎಂದು ಅರಸನು ಕೇಳಿದನು. ಆಗ ಆಕೆಯು, “ಈ ಸ್ತ್ರೀಯು ನನಗೆ, ನಿನ್ನ ಮಗನನ್ನು ತೆಗೆದುಕೊಂಡು ಬಾ, ನಾವು ಈ ಹೊತ್ತು ಅವನನ್ನು ತಿಂದುಬಿಡೋಣ, ನಾಳೆ ನನ್ನ ಮಗನನ್ನು ತಿನ್ನೋಣ” ಎಂದು ಹೇಳಿದ್ದರಿಂದ,

ಯಾಜಕರು ಕತ್ತಿಯಿಂದ ಸಂಹೃತರಾದರು; ಇವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸಲಿಲ್ಲ.

ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ.

ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?

ಯೆಹೋವನೇ, ನಮ್ಮ ದುಷ್ಟತನವನ್ನೂ ಒಪ್ಪಿಕೊಳ್ಳುತ್ತೇವೆ, ನಮ್ಮ ಪೂರ್ವಿಕರ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಾವು ನಿನಗೇ ಪಾಪಮಾಡಿದ್ದೇವೆ.

ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವರ ಸೇವಕರನ್ನೂ ವ್ಯಾಧಿ, ಖಡ್ಗ ಮತ್ತು ಕ್ಷಾಮಗಳಿಂದ ಹತರಾಗದೆ ಉಳಿದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು. ಅವನು ಅವರನ್ನು ಕರುಣಿಸದೆ, ಕನಿಕರದಿಂದ ಉಳಿಸದೆ ಕತ್ತಿಯಿಂದ ಸಂಹರಿಸುವನು.

ನಾನು ಕೂಗಿಕೊಂಡರೂ ನನ್ನ ನಲ್ಲರಿಂದ ನನಗೆ ಮೋಸವಾಯಿತು, ನನ್ನ ಯಾಜಕರೂ ಮತ್ತು ಹಿರಿಯರೂ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದು ಆಹಾರವನ್ನು ಹುಡುಕುವುದರಲ್ಲಿಯೇ ಪಟ್ಟಣದೊಳಗೆ ಪ್ರಾಣಬಿಟ್ಟರು.

ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕರ ಪಾಪ ಮತ್ತು ಪ್ರವಾದಿಗಳ ದೋಷಗಳಿಂದಲೇ ಈ ಗತಿ ಬಂತು.

ಹೀಗಿರಲು, ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.”

¶ ಆತನು ಅವರಿಗೆ, “ಹೊರಡಿರಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ, ದೇವಾಲಯವನ್ನು ಹೊಲೆಗೆಡಿಸಿರಿ” ಎಂದು ಅಪ್ಪಣೆ ಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು.