TSK

TSK · ಪ್ರಲಾಪಗಳು 3:1

مراجع Treasury of Scripture Knowledge في ಕನ್ನಡ IRV.

العودة إلى المقطع

ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು; ನಮ್ಮನ್ನು ಭೂಮಿಯ ಅಧೋಭಾಗದಿಂದ ಮೇಲೆತ್ತು.

ಯೌವನಾರಭ್ಯ ಕುಗ್ಗಿದವನೂ, ಮೃತಪ್ರಾಯನೂ, ನಿನ್ನ ಗದರಿಕೆಯಿಂದ ದೆಸೆಗೆಟ್ಟವನೂ ಆಗಿದ್ದೇನಲ್ಲಾ.

ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.

ನಾನು ವಿನೋದಗಾರರ ಕೂಟದಲ್ಲಿ ಕುಳಿತುಕೊಳ್ಳಲಿಲ್ಲ, ಉಲ್ಲಾಸಪಡಲೂ ಇಲ್ಲ. ನೀನು ನನ್ನ ಮೇಲೆ ಕೈಯಿಟ್ಟಿದ್ದರಿಂದ ಒಂಟಿಗನಾಗಿ ಕುಳಿತೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ.

ನಾನು ಶ್ರಮದುಃಖಗಳನ್ನು ನೋಡುವುದಕ್ಕೂ, ನನ್ನ ಆಯುಸ್ಸು ಅವಮಾನದಿಂದ ಕ್ಷಯಿಸುವುದಕ್ಕೂ ಗರ್ಭದಿಂದ ಏಕೆ ಹೊರಟು ಬಂದೆನು?

ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿ ರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ.