ಕೀರ್ತನೆಗಳು 10:9
TSK
ಗವಿಯಲ್ಲಿ ಅಡಗಿಕೊಂಡಿರುವ ಸಿಂಹದಂತೆ ಅವನು ಮರೆಯಾಗಿ ಹೊಂಚಿಕೊಂಡಿರುವನು. ಅವನು ಬಲೆಯೊಡ್ಡಿ ಕಾದಿದ್ದು, ಕುಗ್ಗಿದವನನ್ನು ಹಿಡಿದು ಎಳೆದುಕೊಂಡು ಹೋಗುತ್ತಾನೆ.
TSK
مراجع Treasury of Scripture Knowledge في ಕನ್ನಡ IRV.
ಗವಿಯಲ್ಲಿ ಅಡಗಿಕೊಂಡಿರುವ ಸಿಂಹದಂತೆ ಅವನು ಮರೆಯಾಗಿ ಹೊಂಚಿಕೊಂಡಿರುವನು. ಅವನು ಬಲೆಯೊಡ್ಡಿ ಕಾದಿದ್ದು, ಕುಗ್ಗಿದವನನ್ನು ಹಿಡಿದು ಎಳೆದುಕೊಂಡು ಹೋಗುತ್ತಾನೆ.
ನಾನು ಬೆಳಗಿನ ತನಕ ಕೂಗಿಕೊಂಡೇ ಇದ್ದೆನು. ಆತನು ಸಿಂಹದಂತೆ ನನ್ನ ಎಲುಬುಗಳನ್ನೆಲ್ಲಾ ಮುರಿಯುತ್ತಿದ್ದರೂ, ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀಯಲ್ಲಾ ಎಂದು ಪ್ರಲಾಪಿಸಿದೆನು.
ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.
¶ ಯೆಹೋವನ ದಿನವನ್ನು ನಿರೀಕ್ಷಿಸಿಕೊಂಡವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನ ದಿನವು ನಿಮಗೇಕೆ? ಅದು ಬೆಳಕಲ್ಲ ಕತ್ತಲೆಯೇ.