TSK

TSK · ಪ್ರಲಾಪಗಳು 3:20

مراجع Treasury of Scripture Knowledge في ಕನ್ನಡ IRV.

العودة إلى المقطع

ಈ ವಿಷಯವನ್ನು ನೆನಪಿಗೆ ತಂದುಕೊಂಡ ಹಾಗೆಲ್ಲಾ, ನಡುಕವು ನನ್ನ ಮಾಂಸವನ್ನು ಹಿಡಿಯುತ್ತದೆ.

ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.

ನಮ್ಮ ಪ್ರಾಣವು ಧೂಳಿನವರೆಗೂ ಬಗ್ಗಿಹೋಗಿದೆ; ನಮ್ಮ ಶರೀರವು ನೆಲಕ್ಕೆ ಅಂಟಿಕೊಂಡಿದೆ.

ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.