TSK

TSK · ಪ್ರಲಾಪಗಳು 3:24

مراجع Treasury of Scripture Knowledge في ಕನ್ನಡ IRV.

العودة إلى المقطع

ಸ್ವದೇಶಸ್ಥರೊಂದಿಗೂ ಅವರಿಗೆ ಸ್ವತ್ತು ದೊರೆಯುವುದಿಲ್ಲ; ಯೆಹೋವನು ಅವರಿಗೆ ಹೇಳಿದಂತೆ ತಾನೇ ಅವರಿಗೆ ಸ್ವತ್ತಾಗಿರುವನು.

ಅವರು ದೇವರ ಮೇಲೆ ಭರವಸೆ ಇಟ್ಟಿದ್ದರಿಂದ ಮೊರೆಯಿಟ್ಟ ಅವರ ಪ್ರಾರ್ಥನೆಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.

ಸರ್ವಶಕ್ತನಾದ ದೇವರು ನಿನಗೆ ಚಿನ್ನವಾಗಿಯೂ, ಬೆಳ್ಳಿಯ ರಾಶಿಗಳಾಗಿಯೂ ಇರುವನು.

ಯೆಹೋವನನ್ನು ನಿರೀಕ್ಷಿಸುವವರೇ, ದೃಢವಾಗಿರ್ರಿ; ನಿಮ್ಮ ಹೃದಯವು ಧೈರ್ಯದಿಂದಿರಲಿ.

ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.

ಜನರೇ, ಯಾವಾಗಲೂ ಆತನನ್ನೇ ನಂಬಿ, ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; ದೇವರು ನಮ್ಮ ಆಶ್ರಯವು. ಸೆಲಾ

ತನುಮನಗಳು ಕ್ಷಯಿಸಿದರೂ ನನ್ನ ಆತ್ಮಕ್ಕೆ ಬಲವು ನನ್ನ ಶಾಶ್ವತವಾದ ಪಾಲೂ ದೇವರೇ.

ನನ್ನಲ್ಲಿ ಅನೇಕ ಚಿಂತೆಗಳಿರುವಾಗ ನಿನ್ನ ಸಂತೈಸುವಿಕೆಯಿಂದಲೇ, ನನ್ನ ಪ್ರಾಣಕ್ಕೆ ಸಂತೋಷವುಂಟಾಗುತ್ತದೆ.

ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು.

ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು. ಇಸ್ರಾಯೇಲ್ ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದು ಆತನ ನಾಮಧೇಯ.

ಹೀಗಿರಲು ನಾನು ನಿನ್ನ ಕರುಣೆಯನ್ನು ನೆನಪಿಗೆ ತಂದುಕೊಳ್ಳುತ್ತೇನೆ, ಅದರಿಂದ ನನಗೆ ನಿರೀಕ್ಷೆಯುಂಟಾಗುತ್ತದೆ!

ಮತ್ತೊಮ್ಮೆ, ಯೆಶಾಯನು ಹೇಳುವುದೇನಂದರೆ, “ಇಷಯನ ವಂಶಸ್ಥನೂ ಅಂದರೆ ಜನಾಂಗಗಳನ್ನು ಆಳತಕ್ಕವನು ಬರುತ್ತಾನೆ. ಜನಾಂಗಗಳು ಆತನನ್ನು ನಿರೀಕ್ಷಿಸುತ್ತಿರುವರು.”