ಯೋಬನು 30:30
TSK
ನನ್ನ ಚರ್ಮವು ಕರಿದಾಗಿ ಉದುರುತ್ತದೆ, ನನ್ನ ಎಲುಬುಗಳು ತಾಪದಿಂದ ಬೆಂದಿದೆ.
TSK
مراجع Treasury of Scripture Knowledge في ಕನ್ನಡ IRV.
ನನ್ನ ಚರ್ಮವು ಕರಿದಾಗಿ ಉದುರುತ್ತದೆ, ನನ್ನ ಎಲುಬುಗಳು ತಾಪದಿಂದ ಬೆಂದಿದೆ.
ಯೆಹೋವನೇ, ಕರುಣಿಸು; ಕಷ್ಟದಲ್ಲಿ ಬಿದ್ದಿದ್ದೇನೆ. ನನಗುಂಟಾದ ಬಾಧೆಯ ದೆಸೆಯಿಂದ ನನ್ನ ಕಣ್ಣು ಗುಡ್ಡೆ ಸೇದಿಹೋಗಿದೆ; ದೇಹಾತ್ಮಗಳು ಕುಗ್ಗಿಹೋದವು.
ನಿನ್ನ ಬಾಣಗಳು ನನ್ನೊಳಗೆ ಹೊಕ್ಕಿವೆ; ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿದೆ.
ನನ್ನ ಜೀವಮಾನವು ಹೊಗೆಯಂತೆ ಮಾಯವಾಗುತ್ತದೆ; ನನ್ನ ಎಲುಬುಗಳು ಕೊಳ್ಳಿಯಂತೆ ಸುಟ್ಟುಹೋಗುತ್ತವೆ.
ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.