ಅವನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಅವನಿಗೆ ದೊರಕಿದ ಸದುತ್ತರವೂ, ಅವನು ತನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ ಮೊದಲು ಮಾಡಿದ ಅಪರಾಧದ್ರೋಹಗಳೂ, ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ನಿರ್ಮಿಸಿ ಅಶೇರ ಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಕರ ಚರಿತ್ರೆಯಲ್ಲಿ ಬರೆದಿರುತ್ತವೆ.
TSK
TSK · ಪ್ರಲಾಪಗಳು 3:56
مراجع Treasury of Scripture Knowledge في ಕನ್ನಡ IRV.
ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ, ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. ಸೆಲಾ.
ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು; ಉದಯಕಾಲದಲ್ಲಿಯೇ ನನ್ನ ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ, ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು.
ಆತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ; ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.
ದೇವರೇ, ನನ್ನ ಮೊರೆಯನ್ನು ಲಾಲಿಸು; ನನ್ನ ವಿಜ್ಞಾಪನೆಗೆ ಕಿವಿಮುಚ್ಚಿಕೊಳ್ಳಬೇಡ.
ನನ್ನ ವಿರೋಧಿಗಳು ಅನೇಕರಿದ್ದರೂ ಅವರು ನನ್ನನ್ನು ಮುಟ್ಟದಂತೆ ಸುರಕ್ಷಿತವಾಗಿ ಇಡುವನು.
ನಾನಾದರೋ ಯೆಹೋವನೇ, ನಿನಗೆ ಮೊರೆಯಿಡುತ್ತೇನೆ; ಮುಂಜಾನೆಯಲ್ಲಿ ನನ್ನ ವಿಜ್ಞಾಪನೆಯು ನಿನ್ನ ಮುಂದೆ ಬರುವುದು.
“ನೀನು ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ದಾವೀದನ ಪೂರ್ವಿಕರಾದ ಯೆಹೋವನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ.
ಹಾಗೆ ಪವಿತ್ರಾತ್ಮನು ಸಹ ನಮ್ಮ ಬಲಹೀನತೆಯನ್ನು ನೋಡಿ ನಮಗೆ ಸಹಾಯಮಾಡುತ್ತಾನೆ. ಹೇಗೆಂದರೆ ನಾವು ಯಾವಾಗ ಏನು ಬೇಡಿಕೊಳ್ಳಬೇಕೋ ಎನ್ನುವುದು ನಮಗೆ ತಿಳಿದಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದ ನರಳಾಟದಿಂದ ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಾನೆ.