TSK

TSK · ಪ್ರಲಾಪಗಳು 3:66

مراجع Treasury of Scripture Knowledge في ಕನ್ನಡ IRV.

العودة إلى المقطع

ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು.

ಯೆಹೋವನು ಇದನ್ನು ನೋಡಿ ಇಸ್ರಾಯೇಲರನ್ನು ಭೂಲೋಕದಿಂದ ನಿರ್ನಾಮ ಮಾಡುವುದಕ್ಕೆ ಮನಸ್ಸಿಲ್ಲದೆ ಯೋವಾಷನ ಮಗನಾದ ಯಾರೊಬ್ಬಾಮನ ಮುಖಾಂತರವಾಗಿ ಅವರನ್ನು ರಕ್ಷಿಸಿದನು.

ಅವರು ಗಾಳಿ ಹಾರಿಸುವ ಹೊಟ್ಟಿನಂತಾಗಲಿ; ಯೆಹೋವನ ದೂತನು ಅವರನ್ನು ಅಟ್ಟಿಬಿಡಲಿ.

ನಾನು ಈ ಪ್ರಕಾರ ಬಾಯಿಬಿಡುವುದಕ್ಕೆ ಮನಸ್ಸು ಮಾಡಿಕೊಂಡಿದ್ದರೆ, ನಿನ್ನ ಭಕ್ತಕುಲಕ್ಕೆ ದ್ರೋಹಿಯಾಗುತ್ತಿದ್ದೆನು.

ಯೆಹೋವನು ಹೀಗೆನ್ನುತ್ತಾನೆ: “ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?

ಅದಕ್ಕೆ ನಾನು, “ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು; ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿತೀರಿಸು. ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ. ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಜ್ಞಾಪಕಕ್ಕೆ ತಂದುಕೋ.

ಇಸ್ರಾಯೇಲರು ಮೇಲನ್ನು ತಳ್ಳಿಬಿಟ್ಟಿದ್ದಾರೆ; ಶತ್ರುವು ಅವರನ್ನು ಹಿಂದಟ್ಟುವನು.