¶ ಆಗ ನನ್ನ ಜನರು ತಾವು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಂಡಿದ್ದ ಐಗುಪ್ತದ ವಿಷಯವಾಗಿಯೂ ಬೆಚ್ಚಿಬೆರಗಾಗಿ ನಾಚಿಕೆಪಡುವರು.
TSK
TSK · ಪ್ರಲಾಪಗಳು 4:17
مراجع Treasury of Scripture Knowledge في ಕನ್ನಡ IRV.
ಯೆಹೋವನು ಹೀಗೆ ನುಡಿಯುತ್ತಾನೆ, “ದ್ರೋಹಿಗಳಾದ ನನ್ನ ಮಕ್ಕಳ ಗತಿಯನ್ನು ಏನು ಹೇಳಲಿ” “ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಮಾಡಿ, ನನ್ನ ಆತ್ಮದಿಂದ ಪ್ರೇರಿತರಾಗದೆ ಕಪಟ ಉಪಾಯಗಳನ್ನು ಮಾಡಿ ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್ ನದಿಯ ನೀರನ್ನು ಕುಡಿಯ ಅವಶ್ಯಕತೆ ಇತ್ತೆ? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡುವ ಅವಶ್ಯಕತೆ ಇತ್ತೇ?
ಅಲ್ಲಿಂದಲೂ ತಲೆಯ ಮೇಲೆ ಕೈಹೊತ್ತುಕೊಂಡು ಹೊರಡುವಿ; ಏಕೆಂದರೆ ನಿನ್ನ ಭರವಸೆಗಳನ್ನು ಯೆಹೋವನು ನಿರಾಕರಿಸಿದ್ದಾನೆ; ಅವುಗಳ ಮುಖಾಂತರ ನಿನ್ನ ಕಾರ್ಯವು ಕೈಗೂಡುವುದಿಲ್ಲ.
“ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನನ್ನನ್ನು ವಿಚಾರಿಸುವುದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ, ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವುದು.
ನಾನು ಕೂಗಿಕೊಂಡರೂ ನನ್ನ ನಲ್ಲರಿಂದ ನನಗೆ ಮೋಸವಾಯಿತು, ನನ್ನ ಯಾಜಕರೂ ಮತ್ತು ಹಿರಿಯರೂ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದು ಆಹಾರವನ್ನು ಹುಡುಕುವುದರಲ್ಲಿಯೇ ಪಟ್ಟಣದೊಳಗೆ ಪ್ರಾಣಬಿಟ್ಟರು.
ಆಗ ಐಗುಪ್ತದ ಸಕಲ ನಿವಾಸಿಗಳು ನಾನೇ ಯೆಹೋವನು ಎಂದು ತಿಳಿಯವರು. ಅವರು ಇಸ್ರಾಯೇಲ್ ವಂಶದವರಿಗೆ ದಂಟಿನ ಊರುಗೋಲಾಗಿದ್ದರು.