TSK

TSK · ಪ್ರಲಾಪಗಳು 5:13

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಮೋಶೆಯು ದೊಡ್ಡವನಾದ ಮೇಲೆ, ಸ್ವಜನರ ಬಳಿಗೆ ಹೋಗಿ ಅವರ ಬಿಟ್ಟೀಕೆಲಸಗಳನ್ನು ನೋಡುತ್ತಿದ್ದನು. ಆಗ ಒಬ್ಬ ಐಗುಪ್ತ್ಯದವನು ತನ್ನ ಸ್ವಂತ ಜನರಾದ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಹೊಡೆಯುವುದನ್ನು ಕಂಡನು.

ನಿನ್ನನ್ನು ಹಗೆಮಾಡುವವನ ಕತ್ತೆಯ ಹೊರೆಯ ಕೆಳಗೆ ಬಿದ್ದಿರುವುದನ್ನು ಕಂಡರೆ, ಅದನ್ನು ಎಬ್ಬಿಸುವುದಕ್ಕೆ ಮನಸ್ಸಿಲ್ಲದಿದ್ದರೂ ಅವನಿಗೆ ಸಹಾಯ ಮಾಡಿ ಎಬ್ಬಿಸಲೇಬೇಕು.

¶ ತರುವಾಯ ಜನರೂ ಅವರ ಹೆಂಡತಿಯರೂ ತಮ್ಮ ಬಂಧುಗಳಾದ ಯೆಹೂದ್ಯರಿಗೆ ವಿರುದ್ಧವಾಗಿ ಬಹಳ ಗೋಳಾಡ ತೊಡಗಿದರು.

ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ, ಈಜಾಡುವ ಬಟ್ಟೆಯ ನೆರಿಗೆಯನ್ನು ಹರಿದುಬಿಟ್ಟು, ಬೆತ್ತಲಾಗಿ ನದಿಗಳನ್ನು ಹಾದುಹೋಗು.

‹ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ಆದರೆ ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು›‹ಮುಟ್ಟಲೊಲ್ಲರು.›