TSK

TSK · ಪ್ರಲಾಪಗಳು 5:8

مراجع Treasury of Scripture Knowledge في ಕನ್ನಡ IRV.

العودة إلى المقطع

“ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಅಣ್ಣತಮ್ಮಂದಿರಿಗೆ ದಾಸಾನುದಾಸನಾಗಲಿ” ಎಂದನು.

¶ ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನೂ, ಅರಬಿಯನಾದ ಗೆಷೆಮನೂ ಈ ವರ್ತಮಾನವನ್ನು ಕೇಳಿದಾಗ ಅವರು ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿ, “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರುದ್ಧವಾಗಿ ತಿರುಗಿ ಬೀಳಬೇಕೆಂದಿದ್ದೀರೋ?” ಎಂದು ಕೇಳಿದರು.

ಅವನ ಮಕ್ಕಳು ಆಶ್ರಯವಿಲ್ಲದೆ ನ್ಯಾಯಸ್ಥಾನದಲ್ಲಿ ಸೋತುಹೋಗುವರು. ಅವರನ್ನು ಬಿಡಿಸತಕ್ಕವರು ಯಾರೂ ಇಲ್ಲ.

ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು, ಶತ್ರುವು ಸಿಂಹದಂತೆ ಮೇಲೆ ಬಿದ್ದು ನನ್ನನ್ನು ಹರಿದುಬಿಟ್ಟಾನು.

ಈಗ ಅವಳೊಂದಿಗೆ ವ್ಯಭಿಚಾರ ಮಾಡಿದವರ ಕಣ್ಣೆದುರಿಗೆ ಅವಳ ನಾಚಿಕೆಗೇಡಿತನವನ್ನು ಬೈಲಿಗೆ ತರುವೆನು; ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.