TSK

TSK · ಯಾಜಕಕಾಂಡ 1:17

مراجع Treasury of Scripture Knowledge في ಕನ್ನಡ IRV.

العودة إلى المقطع

ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.

ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ.

ಅದನ್ನು ಆರೋನನ ವಂಶದವರಾದ ಯಾಜಕರ ಬಳಿಗೆ ತರಬೇಕು. ಯಾಜಕನು ದೇವರಿಗೆ ನೈವೇದ್ಯವಾದದ್ದನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಎಣ್ಣೆ ಬೆರೆಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.

ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು; ಆದರೆ ತಲೆಯನ್ನು ಪೂರ್ಣವಾಗಿ ತೆಗೆದುಬಿಡಬಾರದು.

ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಿಂದ ತೊಳೆದು, ಮೋಶೆ ಆ ಟಗರನ್ನು ಯಜ್ಞವೇದಿಯ ಮೇಲೆ ಪೂರ್ತಿಯಾಗಿ ಹೋಮ ಮಾಡಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳಯುಕ್ತ ಸರ್ವಾಂಗಹೋಮವಾಗಿತ್ತು.

ಸಾಯಂಕಾಲದಲ್ಲಿ ಇನ್ನೊಂದು ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧಕರ ಹೋಮವಾಗಿರುವುದು.

ಅನಂತರ ಯೇಸು ತಿರುಗಿ ಮಹಾ ಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.

ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು.

ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.

ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.