TSK

TSK · ಯಾಜಕಕಾಂಡ 1:5

مراجع Treasury of Scripture Knowledge في ಕನ್ನಡ IRV.

العودة إلى المقطع

ನೀನು ಅದನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಯ ನಾಲ್ಕು ಕಡೆಗಳಿಗೆ ಚಿಮುಕಿಸಬೇಕು.

ಅದನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಉತ್ತರ ಭಾಗದಲ್ಲಿ ವಧಿಸಬೇಕು. ತರುವಾಯ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಹಾಕಬೇಕು.

ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.

ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು, ದೇವದರ್ಶನ ಗುಡಾರದ ಎದುರಾಗಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.

¶ “ತರುವಾಯ ಅವನು ಜನರಿಗಾಗಿ ಮಾಡಿದ ದೋಷಪರಿಹಾರಕ ಯಜ್ಞದ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯೊಳಗೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ, ಕೃಪಾಸನದ ಮೇಲೆಯೂ ಮತ್ತು ಅದರ ಎದುರಾಗಿಯೂ ಚಿಮುಕಿಸಬೇಕು.

ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ಅವುಗಳ ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಪ್ರೋಕ್ಷಿಸಿದರು. ಅನಂತರ ಟಗರುಗಳನ್ನು ವಧಿಸಿದ ಮೇಲೆ ಯಾಜಕರು, ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಅನಂತರ ಟಗರುಗಳನ್ನು ವಧಿಸಿ ಅವುಗಳ ರಕ್ತವನ್ನು ಯಜ್ಞವೇದಿಗೆ ಪ್ರೋಕ್ಷಿಸಿದರು. ಆ ಮೇಲೆ ಕುರಿಮರಿಗಳನ್ನು ವಧಿಸಿ ಅವುಗಳ ರಕ್ತವನ್ನೂ ಯಜ್ಞವೇದಿಗೆ ಪ್ರೋಕ್ಷಿಸಿದರು.

ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು. ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು. ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು.

¶ ಆಗ ಆ ಪುರುಷನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಸರ್ವಾಂಗಹೋಮಕ್ಕೂ, ರಕ್ತವೆರಚುವ ಸಂಸ್ಕಾರಕ್ಕೂ ಯಜ್ಞವೇದಿಯನ್ನು ನಿರ್ಮಿಸುವಾಗ ಈ ವಿಧಿಗಳನ್ನು ಕೈಗೊಳ್ಳಬೇಕು.

¶ ಇದಲ್ಲದೆ ಪ್ರತಿಯೊಬ್ಬ ಯಾಜಕನು ಪ್ರತಿದಿನ ಸೇವೆಮಾಡುತ್ತಾ, ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು.

ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.