TSK

TSK · ಯಾಜಕಕಾಂಡ 10:14

مراجع Treasury of Scripture Knowledge في ಕನ್ನಡ IRV.

العودة إلى المقطع

“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸಮಾಧಾನಯಜ್ಞದ ಪಶುಗಳನ್ನು ಯೆಹೋವನಿಗೆ ಸಮರ್ಪಿಸುವವನು ಆ ಯಜ್ಞದ್ರವ್ಯಗಳಲ್ಲಿ ಯೆಹೋವನಿಗೆ ಸಲ್ಲಬೇಕಾದದ್ದನ್ನು ತಂದುಕೊಡಬೇಕು.

ಮೋಶೆಯು ಆಜ್ಞಾಪಿಸಿದಂತೆ ಆರೋನನು ಅವುಗಳ ಎದೆಯ ಭಾಗಗಳನ್ನು ಮತ್ತು ಬಲತೊಡೆಯನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು.

¶ “ಇದಲ್ಲದೆ ಇಸ್ರಾಯೇಲರು ಮಾಡುವ ಸಮಾಧಾನಯಜ್ಞಗಳಿಂದ ನನಗೋಸ್ಕರ ಪ್ರತ್ಯೇಕಿಸಿಕೊಡುವ ದ್ರವ್ಯಗಳೂ, ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಸೇರಬೇಕು. ಇವು ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿರುವ ಶುದ್ಧರಾದವರೆಲ್ಲರೂ ಊಟ ಮಾಡಬಹುದು.