TSK

TSK · ಯಾಜಕಕಾಂಡ 10:9

مراجع Treasury of Scripture Knowledge في ಕನ್ನಡ IRV.

العودة إلى المقطع

ದೇವದರ್ಶನ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ಪರದೆಯ ಹೊರಗೆ ಆರೋನನೂ, ಅವನ ಮಕ್ಕಳೂ ಅದನ್ನು ಸಾಯಂಕಾಲದಿಂದ ಉದಯದವರೆಗೆ ಯೆಹೋವನ ಸನ್ನಿಧಿಯಲ್ಲಿ ಆ ದೀಪವು ಉರಿಯುತ್ತಿರುವಂತೆ ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರು ಅವರ ಸಂತತಿಯವರು ಈ ನಿಯಮವನ್ನು ತಲತಲಾಂತರದವರೆಗೆ ಶಾಶ್ವತವಾಗಿ ಅನುಸರಿಸಬೇಕು. ಅದು ಅವರಿಗೆ ನಿತ್ಯ ನಿಯಮವಾಗಿರಬೇಕು.

ವಿಶೇಷವಾದ ಹರಕೆಯನ್ನು ಮಾಡಿದಾಗ ದ್ರಾಕ್ಷಾರಸವನ್ನೂ ಮತ್ತು ಮದ್ಯಪಾನವನ್ನೂ ಮುಟ್ಟಬಾರದು. ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯಪಾನದ ಹುಳಿಯನ್ನಾಗಲಿ ಕುಡಿಯಬಾರದು. ದ್ರಾಕ್ಷಿ ಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು. ಹಸಿ ಅಥವಾ ಒಣಗಿದ ದ್ರಾಕ್ಷಿ ಹಣ್ಣನ್ನೂ ತಿನ್ನಬಾರದು.

ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ, ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ.

ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ.

ಒಳಗಿನ ಅಂಗಳವನ್ನು ಪ್ರವೇಶಿಸುವಾಗ, ಯಾವ ಯಾಜಕನೂ ದ್ರಾಕ್ಷಾರಸವನ್ನು ಕುಡಿಯಬಾರದು.

ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.

ಅವನು ಕುಡಕನು, ಜಗಳವಾಡುವವನೂ ಆಗಿರದೆ, ಸಾತ್ವಿಕನೂ, ಹೊಡೆದಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು.

ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ, ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೊ.