TSK

TSK · ಯಾಜಕಕಾಂಡ 11:33

مراجع Treasury of Scripture Knowledge في ಕನ್ನಡ IRV.

العودة إلى المقطع

ಕಬ್ಬಿಣದ ಹಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನಸಿದ್ದಾಗಿರಬೇಕು. ಅದನ್ನು ಭಾಗಭಾಗವಾಗಿ ಮಾಡಿ ಯೆಹೋವನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು.

ಆ ಜಂತುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಆ ಸಾಮಾನು ಅಶುದ್ಧವಾಗುವುದು. ಒಲೆಗಳಲ್ಲಿ ಅದು ಒಂಟಿ ಒಲೆಯಾಗಿದ್ದರೂ ಅಥವಾ ಜೋಡಿ ಒಲೆಯಾಗಿದ್ದರೂ ಅದು ಅಶುದ್ಧವಾದುದರಿಂದ ಅದನ್ನು ಒಡೆದುಬಿಡಬೇಕು; ಅದು ಅಶುದ್ಧವೇ.

ಅವನು ಆ ಮನೆಯನ್ನು ಕೆಡವಿ, ಅದರ ಎಲ್ಲಾ ಕಲ್ಲುಗಳನ್ನು, ತೊಲೆಗಳನ್ನು ಮತ್ತು ಮಣ್ಣನ್ನು ಊರಿನ ಹೊರಗೆ ಅಪವಿತ್ರಸ್ಥಳದಲ್ಲಿ ಹಾಕಿಸಬೇಕು.

ಮುಚ್ಚಳ ಹಾಕದೆ ತೆರೆದಿರುವ ಎಲ್ಲಾ ಪಾತ್ರೆಗಳು ಅಶುದ್ಧವಾಗಿರುವವು.

¶ ಭೂಮಿಯ ಮೇಲಿರುವ ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ.