TSK

TSK · ಯಾಜಕಕಾಂಡ 11:7

مراجع Treasury of Scripture Knowledge في ಕನ್ನಡ IRV.

العودة إلى المقطع

ಹಂದಿಯ ಗೊರಸು ಸೀಳಿದ್ದರೂ ಅದು ಮೆಲಕುಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಬಾರದು; ಇವುಗಳ ಹೆಣವನ್ನು ಮುಟ್ಟಬಾರದು.

ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;

¶ ‹“ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.›

‹ಆಗ ಅವನು ಹೋಗಿ ಆ ದೇಶದ ನಿವಾಸಿಗಳೊಳಗೆ ಒಬ್ಬನಲ್ಲಿ ಸೇರಿಕೊಂಡನು. ಆ ಮನುಷ್ಯನು ಹಂದಿಗಳನ್ನು ಮೇಯಿಸುವುದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.›