ಅವನು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಅಥವಾ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.
TSK
TSK · ಯಾಜಕಕಾಂಡ 12:6
مراجع Treasury of Scripture Knowledge في ಕನ್ನಡ IRV.
ಅದಲ್ಲದೆ ಅವನು ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಯಜ್ಞವಾಗಿ ಒಂದನ್ನು, ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು.
ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.
¶ ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಅವರ ಶುದ್ಧೀಕರಣದ ದಿನಗಳು ಮುಗಿದ ಮೇಲೆ, “ಚೊಚ್ಚಲು ಗಂಡೆಲ್ಲಾ ಕರ್ತನಿಗೆ ಮೀಸಲೆನಿಸಿಕೊಳ್ಳುವುದು” ಎಂದು ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, ಅವರು ಆ ಕೂಸನ್ನು ಕರ್ತನಿಗೆ ಸಮರ್ಪಿಸುವುದಕ್ಕಾಗಿ ಯೆರೂಸಲೇಮಿಗೆ ತೆಗೆದುಕೊಂಡು ಹೋದರು.
ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.
ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.