ಯೆಹೋವನು ತಿರುಗಿ ಅವನಿಗೆ, “ನಿನ್ನ ಕೈಯನ್ನು ಎದೆಯಭಾಗದೊಳಗೆ ಇಟ್ಟುಕೋ” ಎಂದು ಹೇಳಿದನು. ಅವನು ಹಾಗೆ ಇಟ್ಟುಕೊಂಡು ಹೊರಗೆ ತೆಗೆಯಲು ಅವನ ಕೈ ಕುಷ್ಠ ಹತ್ತಿ ಹಿಮದಂತೆ ಬೆಳ್ಳಗಾಗಿತ್ತು.
TSK
TSK · ಯಾಜಕಕಾಂಡ 13:2
مراجع Treasury of Scripture Knowledge في ಕನ್ನಡ IRV.
ಆ ಮನೆಯ ಒಡೆಯನು ಯಾಜಕನ ಬಳಿಗೆ ಬಂದು, ‘ನನ್ನ ಮನೆಯಲ್ಲಿ ಕುಷ್ಠರೋಗದ ಗುರುತು ಉಂಟಾದಂತೆ ತೋರುತ್ತದೆ’ ಎಂದು ಅವನಿಗೆ ತಿಳಿಸಬೇಕು.
ಆ ಮೇಘವು ದೇವದರ್ಶನದ ಗುಡಾರದ ಮೇಲಿನಿಂದ ಬಿಟ್ಟುಹೋಯಿತು. ಪಕ್ಕನೆ ಮಿರ್ಯಾಮಳಿಗೆ ತೊನ್ನು ಹತ್ತಿದ್ದರಿಂದ ಆಕೆಯ ಚರ್ಮ ಹಿಮದಂತೆ ಬೆಳ್ಳಗಾಗಿ ಹೋಯಿತು. ಆರೋನನು ಮಿರ್ಯಾಮಳನ್ನು ನೋಡಿದಾಗ ಆಕೆಗೆ ತೊನ್ನು ಹಿಡಿದಿದೆ ಎಂದು ತಿಳಿದುಕೊಂಡನು.
¶ ವಿಧವಿಧವಾದ ಕೊಲೆ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಅಥವಾ ಚರ್ಚೆಗಳು ನಿಮ್ಮ ಊರಿನಲ್ಲಿ ಉಂಟಾದಾಗ, ನ್ಯಾಯ ತೀರಿಸುವುದು ಕಷ್ಟವಾದರೆ, ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳಕ್ಕೆ ಹೋಗಬೇಕು.
¶ ಐಗುಪ್ತ್ಯರ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.
¶ ಅರಾಮ್ಯರ ಅರಸನಿಗೆ ನಾಮಾನನೆಂಬ ಒಬ್ಬ ಸೇನಾಧಿಪತಿಯಿದ್ದನು. ಯೆಹೋವನು ಇವನ ಮುಖಾಂತರವಾಗಿ ಅರಾಮ್ಯರಿಗೆ ಜಯವನ್ನು ಅನುಗ್ರಹಿಸಿದ್ದದರಿಂದ ಅರಸನು ಇವನನ್ನು ಮಹಾ ಪುರುಷನೆಂದೂ ಸನ್ಮಾನಯೋಗ್ಯನೆಂದೂ ಗೌರವಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಕುಷ್ಠರೋಗಿಯಾಗಿದ್ದನು.
ಆಗ ಧೂಪ ಹಾಕಬೇಕೆಂದು ಕೈಯಲ್ಲಿ ಧೂಪಾರತಿಯನ್ನು ಹಿಡಿದುಕೊಂಡಿದ್ದ ಉಜ್ಜೀಯನು ಕೋಪಗೊಂಡನು. ಅವನು ಯೆಹೋವನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು, ಯಾಜಕರೊಡನೆ ಸಿಟ್ಟಿನಿಂದ ಮಾತನಾಡುತ್ತಿರುವಾಗಲೆ ಯಾಜಕರ ಸಮಕ್ಷಮದಲ್ಲೇ, ಅವನ ಹಣೆಯ ಮೇಲೆ ಕುಷ್ಠವು ಕಾಣಿಸಿಕೊಂಡಿತು.
ಕರ್ತನಾದ ಯೆಹೋವನು ಚೀಯೋನಿನ ಪುತ್ರಿಯರ ನಡುನೆತ್ತಿಯನ್ನೂ ಹುಣ್ಣಿನಿಂದ ಬಾಧಿಸಿ, ಅವರ ಮಾನವನ್ನು ಬಯಲುಮಾಡುವನು.
ಆಗ ಯೇಸು ಅವನಿಗೆ; ‹“ನೋಡು, ಯಾರಿಗೂ ಹೇಳಬೇಡ;›‹ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;”›‹ಅದು ಅವರಿಗೆ ಸಾಕ್ಷಿಯಾಗಲಿ› ಎಂದು ಹೇಳಿದನು.
ಆಗ ಆತನು ಅವನಿಗೆ, ‹“ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ಆಜ್ಞಾಪಿಸಿರುವ ಕಾಣಿಕೆಯನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ”› ಎಂದು ಅಪ್ಪಣೆಕೊಟ್ಟನು.