TSK

TSK · ಯಾಜಕಕಾಂಡ 13:46

مراجع Treasury of Scripture Knowledge في ಕನ್ನಡ IRV.

العودة إلى المقطع

“ಕುಷ್ಠರೋಗಿಗಳನ್ನು, ಸಾಂಕ್ರಾಮಿಕವಾದ ಚರ್ಮರೋಗ ಇರುವವರನ್ನು, ಮೇಹಸ್ರಾವವುಳ್ಳವರನ್ನು ಹಾಗು ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.

¶ ಊರುಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ, “ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೋ?

ಉಜ್ಜೀಯನು ಜೀವದಿಂದಿರುವ ವರೆಗೂ ಕುಷ್ಠರೋಗಿಯಾಗಿದ್ದು, ಯೆಹೋವನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಅವನು ಕುಷ್ಠದ ದೆಸೆಯಿಂದ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾದಿಪತ್ಯವನ್ನೂ ಮತ್ತು ಪ್ರಜಾಪಾಲನೆಯನ್ನೂ ಅವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.

ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಗುಲಾಮಳಾದಳು.

ಒಂದು ಹಳ್ಳಿಗೆ ಬಂದಾಗ ಹತ್ತುಮಂದಿ ಕುಷ್ಠರೋಗಿಗಳು ಆತನ ಎದುರಿಗೆ ಬಂದು ದೂರದಲ್ಲಿ ನಿಂತು,

ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.

ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.

‹ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ›‹ಹೊರಗಿರುವರು”› ಎಂದು ಹೇಳಿದನು.