TSK

TSK · ಯಾಜಕಕಾಂಡ 16:13

مراجع Treasury of Scripture Knowledge في ಕನ್ನಡ IRV.

العودة إلى المقطع

ಆ ಕೃಪಾಸನವನ್ನು ಮಂಜೂಷದ ಮೇಲಿರಿಸಬೇಕು. ನಾನು ನಿನಗೆ ಕೊಡುವ ಆಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇರಿಸಬೇಕು

¶ “ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೆ ನೀವು ಜಾಲೀಮರದಿಂದ ಒಂದು ಧೂಪವೇದಿಯನ್ನು ಮಾಡಿಸಬೇಕು.

ಯಾಜಕರು ಈ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸತ್ತಾರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.

ಅದಕ್ಕೆ ಅನುಸಾರವಾಗಿ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಮತ್ತು ಆರೋನರ ಜೊತೆಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನಲ್ಲಿ ನಿಂತುಕೊಂಡರು.

¶ ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.

ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.

¶ ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.