TSK

TSK · ಯಾಜಕಕಾಂಡ 18:22

مراجع Treasury of Scripture Knowledge في ಕನ್ನಡ IRV.

العودة إلى المقطع

ಯಾವನಾದರೂ ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಿದರೆ ಅವರಿಬ್ಬರೂ ಅಸಹ್ಯವಾದ ಕೆಲಸವನ್ನು ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.

¶ ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ದುಷ್ಟ ಜನರು ಬಂದು ಆ ಮನೆಯನ್ನು ಸುತ್ತಿಕೊಂಡು, ಬಾಗಿಲನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ; ಅವನೊಡನೆ ನಾವು ಸಂಗಮಿಸಬೇಕು” ಎಂದು ಕೂಗಿದರು.

ಅವರು ಇಂಥದ್ದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗಳಿಗೆ ಒಪ್ಪಿಸಿಬಿಟ್ಟನು. ಅವರ ಹೆಂಗಸರು ಸ್ವಾಭಾವಿಕವಾದ ಭೋಗವನ್ನು ತೊರೆದು ಸ್ವಭಾವಕ್ಕೆ ವಿರುದ್ಧವಾದ ಕಾಮಕೃತ್ಯಗಳನ್ನು ಮಾಡಿದರು.

ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ.