TSK

TSK · ಯಾಜಕಕಾಂಡ 19:11

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಒಬ್ಬನು ಎತ್ತನ್ನಾಗಲಿ, ಕುರಿಯನ್ನಾಗಲಿ ಕದ್ದುಕೊಂಡು ಕೊಯ್ದರೆ ಇಲ್ಲವೆ ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನು ಒಂದು ಕುರಿಗೆ ಬದಲಾಗಿ ನಾಲ್ಕು ಕುರಿಗಳನ್ನು ಕೊಡಬೇಕು.

¶ ಒಬ್ಬನು ತನ್ನ ನೆರೆಯವನಿಗೆ ಕತ್ತೆಯನ್ನಾಗಲಿ, ಎತ್ತನ್ನಾಗಲಿ, ಕುರಿಯನ್ನಾಗಲಿ ಬೇರೆ ಯಾವ ಪಶುವನ್ನಾಗಲಿ ಕಾಪಾಡುವುದಕ್ಕೆ ಕೊಟ್ಟಿದ್ದು, ಅದು ಸತ್ತರೆ ಇಲ್ಲವೆ ಗಾಯಗೊಂಡರೆ ಇಲ್ಲವೆ ಯಾರೂ ತಿಳಿಯದಂತೆ ಕಳ್ಳತನವಾದರೆ,

ಮೋಸಗಾರನು ನನ್ನ ಮನೆಯಲ್ಲಿ ಇರಲೇಬಾರದು; ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು.

ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.

ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ.

¶ “ನೀವು ಮಾಡಬೇಕಾದ ಕಾರ್ಯಗಳು ಇವೇ. ಪ್ರತಿಯೊಬ್ಬನೂ ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ, ಸಮಾಧಾನವಾದ ನ್ಯಾಯವನ್ನೂ ಸ್ಥಾಪಿಸಿರಿ;

ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.

¶ ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು “ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ.

ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ.

ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.