TSK

TSK · ಯಾಜಕಕಾಂಡ 19:16

مراجع Treasury of Scripture Knowledge في ಕನ್ನಡ IRV.

العودة إلى المقطع

ಮೋಸದ ಕಾರ್ಯಕ್ಕೆ ದೂರವಾಗಿರಬೇಕು. ನಿರಪರಾಧಿಯೂ, ನೀತಿವಂತನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇಬಾರದು. ಅಂಥ ದುಷ್ಟನಿಗೆ ನಾನು ಶಿಕ್ಷೆಯನ್ನು ವಿಧಿಸದೇ ಬಿಡುವುದಿಲ್ಲ.

ಅವನು ದೇವರನ್ನೂ ಮತ್ತು ಅರಸನನ್ನೂ ಶಪಿಸಿದನು ಎಂಬುದಾಗಿ ಇಬ್ಬರ ಸಾಕ್ಷಿ ಹೇಳಿಸಿ, ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ” ಎಂದು ಬರೆದಿದ್ದಳು.

ನೀವು ಕುಳಿತುಕೊಂಡು ನಿಮ್ಮ ಸಹೋದರರ ವಿರುದ್ಧವಾಗಿ ಮಾತನಾಡುತ್ತೀರಿ; ನಿಮ್ಮ ಒಡಹುಟ್ಟಿದವರನ್ನು ದೂರುತ್ತೀರಿ.

ಹೊಟ್ಟೆಯಲ್ಲಿ ಹಗೆಯನ್ನಿಟ್ಟುಕೊಂಡವನು ಸುಳ್ಳುಗಾರ, ಚಾಡಿಗಾರನು ಜ್ಞಾನಹೀನ.

ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ಆದುದರಿಂದ ತುಟಿ ಬಿಗಿಹಿಡಿಯದವನ ಗೊಡವೆಗೆ ಹೋಗಬೇಡ.

ನೀವೆಲ್ಲರೂ ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ. ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಹೇಳುತ್ತಾ ತಿರುಗಾಡುವನು.

ಆಗ ಅವರು ಕೆಲವು ಜನರಿಗೆ, “ಇವನು ಮೋಶೆಗೆ ವಿರೋಧವಾಗಿಯೂ, ದೇವರಿಗೆ ವಿರೋಧವಾಗಿಯೂ ದೂಷಣೆಯ ಮಾತುಗಳನ್ನಾಡುವುದನ್ನು ಕೇಳಿದೆವೆಂದು” ಹೇಳಿರಿ ಎಂದು ಕೆಲವರನ್ನು ಮನವೊಲಿಸಿದರು.

ಹಾಗೆಯೇ ಸಭಾಸೇವಕಿಯರಾದ ಸ್ತ್ರೀಯರೂ ಗೌರವವುಳ್ಳವರಾಗಿರಬೇಕು, ಚಾಡಿಹೇಳುವವರಾಗಿರದೆ, ಸ್ವಸ್ಥಬುದ್ಧಿಯುಳ್ಳವರೂ, ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು.

ಹಾಗೆಯೇ, ವೃದ್ಧ ಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಅಧೀನರು ಆಗಿರದೆ ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ, ಸದ್ಬೋಧಕಿಯರು ಆಗಿರಬೇಕು.