TSK

TSK · ಯಾಜಕಕಾಂಡ 19:2

مراجع Treasury of Scripture Knowledge في ಕನ್ನಡ IRV.

العودة إلى المقطع

ಏಕೆಂದರೆ ನಾನು ನಿಮ್ಮ ದೇವರಾದ ಯೆಹೋವನು; ನೀವು ದೇವಜನರಿಗೆ ತಕ್ಕಂತೆ ಇರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.

ನಾನು ನಿಮ್ಮ ದೇವರಾದ ಯೆಹೋವನಾಗಿರುವುದರಿಂದ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು.

ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನು ಪರಿಶುದ್ಧರೆಂದು ನೀವು ಭಾವಿಸಬೇಕು.

ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಯಜ್ಞವೇದಿಯ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.

¶ ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು.

‹ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.›

¶ ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.