TSK

TSK · ಯಾಜಕಕಾಂಡ 19:23

مراجع Treasury of Scripture Knowledge في ಕನ್ನಡ IRV.

العودة إلى المقطع

ಅದಕ್ಕೆ ಮೋಶೆ ಯೆಹೋವನ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತುಗಳನ್ನು ಕೇಳುತ್ತಿಲ್ಲ; ಹೀಗಿರುವಾಗ ತೊದಲು ಮಾತನಾಡುವ ನನ್ನ ಮಾತುಗಳಿಗೆ ಫರೋಹನು ಕಿವಿಗೊಟ್ಟಾನೇ?” ಅಂದನು.

¶ ನಿಮ್ಮ ಕಣದಿಂದ ಹಾಗೂ ದ್ರಾಕ್ಷಾಲತೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವುದಕ್ಕೆ ತಡಮಾಡಬಾರದು. ನಿಮ್ಮ ಚೊಚ್ಚಲು ಗಂಡು ಮಕ್ಕಳನ್ನು ನನಗೆ ಸಮರ್ಪಿಸಬೇಕು.

“ನಾನು ನಿಮಗೆ ಸ್ವದೇಶವಾಗಿ ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ,

ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದು ಕೊಡುವವರೆಗೂ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಬಾರದು. ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ.

¶ “ಆಹಾ, ಐಗುಪ್ತರು, ಯೆಹೂದ್ಯರು, ಎದೋಮ್ಯರು, ಅಮ್ಮೋನ್ಯರು, ಮೋವಾಬ್ಯರು, ಚಂಡಿಕೆಯನ್ನು ಬಿಟ್ಟುಕೊಂಡಿರುವ ಅರಣ್ಯದ ನಿವಾಸಿಗಳು, ಅಂತು ಸುನ್ನತಿಯುಳ್ಳವರಾದರೂ ಸುನ್ನತಿಯಿಲ್ಲದ ಇವರೆಲ್ಲರನ್ನೂ ನಾನು ದಂಡಿಸುವ ದಿನಗಳು ಬರುತ್ತವೆ.