TSK

TSK · ಯಾಜಕಕಾಂಡ 19:27

مراجع Treasury of Scripture Knowledge في ಕನ್ನಡ IRV.

العودة إلى المقطع

¶ ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವುದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು ಮತ್ತು ತಲೆಯ ಮುಂದಿನಭಾಗವನ್ನು ಬೋಳಿಸಿಕೊಳ್ಳಲೂ ಬಾರದು.

ಬಯಿತ್ ಮತ್ತು ದೀಬೋನ್ ಊರಿನವರು ಆಳುವುದಕ್ಕಾಗಿ, ತಮ್ಮ ಎತ್ತರವಾದ ಪೂಜಾ ಸ್ಥಳಗಳಿಗೆ ಹೋಗುತ್ತಾರೆ. ನೆಬೋವಿನಲ್ಲಿಯೂ, ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ. ಎಲ್ಲರ ತಲೆಯು ಬೋಳಾಗಿರುವುದು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಲ್ಪಡುವುದು.

ಈ ದೇಶದಲ್ಲಿನ ದೊಡ್ಡವರೂ. ಅಲ್ಪರೂ ಸಾಯುವರು. ಅವರನ್ನು ಯಾರೂ ಹೂಣಿಡುವುದಿಲ್ಲ, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಗಾಯಮಾಡಿಕೊಳ್ಳುವುದಿಲ್ಲ, ತಲೆಬೋಳಿಸಿಕೊಳ್ಳುವುದಿಲ್ಲ.

ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವುದು; ಎಲ್ಲರ ಮುಖದಲ್ಲಿಯೂ ನಾಚಿಕೆ ಕಾಣುವುದು, ಎಲ್ಲರೂ ತಲೆ ಬೋಳಿಸಿಕೊಂಡು ಇರುವರು.