TSK

TSK · ಯಾಜಕಕಾಂಡ 19:4

مراجع Treasury of Scripture Knowledge في ಕನ್ನಡ IRV.

العودة إلى المقطع

¶ “ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.

ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯ್ಯಿಸಿದನು. ಆಗ ಅವರು “ಇಸ್ರಾಯೇಲರೇ ನೋಡಿರಿ, ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು” ಎಂದು ಹೇಳಿದರು.

ಏಕೆಂದರೆ ನಾನು ನಿಮ್ಮ ದೇವರಾದ ಯೆಹೋವನು; ನೀವು ದೇವಜನರಿಗೆ ತಕ್ಕಂತೆ ಇರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.

¶ “ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಅಥವಾ ಕಲ್ಲು ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವುದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು.

¶ ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು.

ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ. ನನ್ನನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.

ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದನು.

¶ “ಜ್ಞಾಪಕಮಾಡಿಕೊಳ್ಳಿರಿ, ಯೆಹೋವನ ಆಲಯಕ್ಕೆ ಅಸ್ತಿವಾರ ಹಾಕಿದ ಈ ದಿನದ ಹಿಂದಿನ ಕಾಲವನ್ನು, ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ.

ಪ್ರಿಯಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.