TSK

TSK · ಯಾಜಕಕಾಂಡ 19:9

مراجع Treasury of Scripture Knowledge في ಕನ್ನಡ IRV.

العودة إلى المقطع

¶ “‘ನಿಮ್ಮ ದೇಶದ ಪೈರನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಹಕ್ಕಲಾಯಬಾರದು. ಇವುಗಳನ್ನು ಬಡವರಿಗೋಸ್ಕರವು ಹಾಗು ಪರದೇಶದವರಿಗೋಸ್ಕರವು ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಯೆಹೋವನು’” ಎಂದು ಹೇಳಿದನು.

¶ ನೀವು ಪೈರುಗಳನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರುವುದಕ್ಕೆ ಹಿಂದಕ್ಕೆ ಹೋಗಬಾರದು; ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.

ಮೋವಾಬ್ಯಳಾದ ರೂತಳು ನವೊಮಿಗೆ, “ನಾನು ಹೋಗಿ, ಹಕ್ಕಲ ತೆನೆಗಳನ್ನು ಆಯ್ದುಕೊಳ್ಳಲು ಅವಕಾಶ ಮಾಡಿಕೊಡುವವರ ಹೊಲದಿಂದ ತೆನೆಗಳನ್ನು ಸಂಗ್ರಹಿಸಿಕೊಂಡು ಬರುತ್ತೇನೆ” ಅಂದಳು. ಅದಕ್ಕೆ ನವೊಮಿ “ಹೋಗಿ ಬಾ ಮಗಳೆ” ಅಂದಳು.

ತರುವಾಯ ತಿರುಗಿ ಹಕ್ಕಲಾಯುವುದಕ್ಕೆ ಏಳಲು ಬೋವಜನು ತನ್ನ ಸೇವಕರಿಗೆ, “ಈಕೆಯು ಸಿವುಡುಗಳ ಮಧ್ಯದಲ್ಲಿ ಹಕ್ಕಲಾಯ್ದುಕೊಳ್ಳಲಿ, ಅಡ್ಡಿ ಮಾಡಬೇಡಿರಿ;