TSK

TSK · ಯಾಜಕಕಾಂಡ 2:10

مراجع Treasury of Scripture Knowledge في ಕನ್ನಡ IRV.

العودة إلى المقطع

ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ, ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದನಂತರ ಅವನಿಗೆ ಕ್ಷಮಾಪಣೆಯಾಗುವುದು. ಧಾನ್ಯನೈವೇದ್ಯ ದ್ರವ್ಯದಲ್ಲಿ ಉಳಿದದ್ದು ಹೇಗೆ ಯಾಜಕನಿಗೆ ಸಲ್ಲುತ್ತದೋ ಇದರಲ್ಲಿಯೂ ಉಳಿದದ್ದು ಯಾಜಕನಿಗೆ ಸಲ್ಲಬೇಕು.’”

ಯಾಜಕರು ತಮಗೋಸ್ಕರ ಸಮರ್ಪಿಸುವ ನೈವೇದ್ಯದ್ರವ್ಯಗಳನ್ನು ಸಂಪೂರ್ಣವಾಗಿ ಹೋಮಮಾಡಬೇಕು; ಅದನ್ನು ತಿನ್ನಲೇಬಾರದು” ಎಂದು ಹೇಳಿದನು.

¶ ಮೋಶೆ ಆರೋನನಿಗೂ ಅವನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೆ, “ಯೆಹೋವನಿಗೆ ಅಗ್ನಿಯ ಮೂಲಕ ಸಮರ್ಪಿತವಾದ ದ್ರವ್ಯಗಳಲ್ಲಿ ಉಳಿದಿರುವ ಧಾನ್ಯನೈವೇದ್ಯ ದ್ರವ್ಯವನ್ನು ತೆಗೆದುಕೊಂಡು, ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ, ಯಜ್ಞವೇದಿಯ ಬಳಿಯಲ್ಲಿ ಊಟಮಾಡಬೇಕು. ಅದು ಮಹಾಪರಿಶುದ್ಧವಾಗಿದೆ.

ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನು ಮತ್ತು ಮಹಾಪರಿಶುದ್ಧವಾದುದನ್ನು ಅವನು ಊಟಮಾಡಬಹುದು.

ಇಸ್ರಾಯೇಲರ ಎಲ್ಲಾ ಕುಟುಂಬಗಳಿಂದ ಅವರನ್ನೇ ಯಾಜಕೋದ್ಯೋಗಕ್ಕೆ ಅಂದರೆ ಯಜ್ಞವನ್ನರ್ಪಿಸುವುದಕ್ಕೂ, ಧೂಪಹಾಕುವುದಕ್ಕೂ, ನನ್ನ ಸನ್ನಿಧಿಯಲ್ಲಿ ಏಫೋದನ್ನು ಧರಿಸಿಕೊಳ್ಳುವುದಕ್ಕೂ ಆರಿಸಿಕೊಂಡೆನು; ಅವರಿಗೆ ಇಸ್ರಾಯೇಲರ ಯಜ್ಞಶೇಷದ ಹಕ್ಕನ್ನು ಅನುಗ್ರಹಿಸಿದೆನು.

ಅವರು ಧಾನ್ಯನೈವೇದ್ಯವನ್ನೂ ದೋಷಪರಿಹಾರಕ ಯಜ್ಞದ್ರವ್ಯವನ್ನೂ, ಪ್ರಾಯಶ್ಚಿತ್ತ ಯಜ್ಞದ್ರವ್ಯವನ್ನೂ ಅನುಭವಿಸಲಿ; ಕೇವಲ ಯೆಹೋವನದಾಗಿಯೇ ಇರಲೆಂದು ಇಸ್ರಾಯೇಲರಲ್ಲಿ ಹರಕೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.