TSK

TSK · ಯಾಜಕಕಾಂಡ 2:11

مراجع Treasury of Scripture Knowledge في ಕನ್ನಡ IRV.

العودة إلى المقطع

ಆ ಏಳು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಹುಳಿಹಿಟ್ಟು ಇರಬಾರದು. ಹುಳಿ ಬೆರಸಿದ್ದನ್ನು ಯಾರು ತಿನ್ನುವರೋ ಅವನು ಪರದೇಶದವನಾಗಲಿ, ಸ್ವದೇಶದವನಾಗಲಿ ಇಸ್ರಾಯೇಲ ಸಮೂಹದೊಳಗಿಂದ ತೆಗೆದುಹಾಕಲ್ಪಡಬೇಕು.

¶ “ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಕೂಡದು. ಪಸ್ಕದಲ್ಲಿ ನೀವು ಸಮರ್ಪಿಸಿದ ಯಜ್ಞಮಾಂಸವನ್ನು ಮರುದಿನದ ಸೂರ್ಯೋದಯದವರೆಗೂ ಉಳಿಸಿಕೊಳ್ಳಬಾರದು.

ಉಳಿದದ್ದನ್ನು ಆರೋನನೂ ಮತ್ತು ಅವನ ವಂಶದವರೂ ತಿನ್ನಬಹುದು; ಅವರು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.

ಯೇಸು ಅವರಿಗೆ ‹“ಎಚ್ಚರಿಕೆ! ಫರಿಸಾಯರ ಮತ್ತು ಸದ್ದುಕಾಯರ›‹ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ”› ಎಂದು ಹೇಳಿದನು.

ಯೇಸು ಅವರಿಗೆ, ‹“ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ”› ಎಂದು ಎಚ್ಚರಿಸಿದನು.

¶ ‹“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.›

ನೀವು ಹೊಗಳಿಕೊಳ್ಳುವುದು ಒಳ್ಳೆಯದಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?

ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು.