¶ “ಈಗ ನೀನು ಅವರ ಮುಂದೆ ಇಡಬೇಕಾದ ನ್ಯಾಯವಿಧಿಗಳು ಯಾವುದೆಂದರೆ;
TSK
TSK · ಯಾಜಕಕಾಂಡ 20:22
مراجع Treasury of Scripture Knowledge في ಕನ್ನಡ IRV.
ಅವರ ದೇಶವು ಅಶುದ್ಧವಾಗಿ ಹೋದುದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ; ಆ ದೇಶವು ತನ್ನಲ್ಲಿ ವಾಸಿಸುತ್ತಿದ ಜನರನ್ನು ತ್ಯಜಿಸಿತು.
ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು.
¶ ಮೋಶೆ ಎಲ್ಲಾ ಇಸ್ರಾಯೇಲರನ್ನು ಕರೆದು, “ಇಸ್ರಾಯೇಲರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು.
ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ.
ಯಾವಾಗಲೂ ನಿನ್ನ ವಿಧಿಗಳನ್ನೇ ಹಂಬಲಿಸುತ್ತಿರುವ ನನ್ನ ಪ್ರಾಣವು ಜಜ್ಜಿಹೋಗಿದೆ.
ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು.
ನಿನ್ನ ವಾಕ್ಯದ ಸಾರಾಂಶವು ಸತ್ಯವೇ, ನಿನ್ನ ನೀತಿವಿಧಿಗಳೆಲ್ಲಾ ಯುಗಯುಗಾಂತರಕ್ಕೂ ಇರುವವು.
ನಿನ್ನ ನಿಬಂಧನೆಗಳನ್ನು ನನಗೆ ಕಲಿಸಿದ್ದಿಯಲ್ಲಾ. ನನ್ನ ತುಟಿಗಳಿಂದ ಸದಾ ನಿನ್ನ ಸ್ತುತಿ ಹೊರಡಲಿ,
ಹೌದು, ಯೆಹೋವನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಿನಗಾಗಿ ಕಾದುಕೊಂಡಿದ್ದೇವೆ; ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಇಷ್ಟವಾಗಿದೆ, ಹಿತವಾಗಿದೆ.