TSK

TSK · ಯಾಜಕಕಾಂಡ 20:3

مراجع Treasury of Scripture Knowledge في ಕನ್ನಡ IRV.

العودة إلى المقطع

ಯಾವನಾದರೂ ಅಶುದ್ಧನಾಗಿದ್ದು, ಯೆಹೋವನಿಗೆ ಸಮರ್ಪಿತವಾದ ಸಮಾಧಾನ ಯಜ್ಞಪಶುವಿನ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು.

¶ “‘ಇಸ್ರಾಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾಗುವರು.

¶ “‘ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು.

ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರು ಆಗಿರುವುದರಿಂದ ಪವಿತ್ರರಾಗಿರಬೇಕು.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ, ಅಸಹ್ಯ ವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ನಿನ್ನನ್ನು ಕುಂದಿಸುವೆನು, ನಾನು ನಿನಗೆ ಕರುಣೆ ತೋರಿಸೆನು, ಕಟಾಕ್ಷಿಸೆನು.

ಇದನ್ನು ಮಾಡಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಅಪವಿತ್ರ ಪಡಿಸಿ, ನಾನು ನೇಮಿಸಿದ ಸಬ್ಬತ್ ದಿನವನ್ನು ಅಪವಿತ್ರ ಮಾಡಿದ್ದಾರೆ.

ಏಕೆಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ ಮತ್ತು ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ. ಆದರೆ ಕೆಡುಕರಿಗೋ ಕರ್ತನು ವಿಮುಖನಾಗಿರುತ್ತಾನೆ.”