TSK

TSK · ಯಾಜಕಕಾಂಡ 21:10

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯಾಕೋಬನು ತನ್ನ ಬಟ್ಟೆಗಳನ್ನು ಹರಿದುಕೊಂಡು ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗಾಗಿ ಬಹು ದಿನಗಳವರೆಗೂ ದುಃಖಪಟ್ಟನು.

¶ ಆರೋನನ ಪವಿತ್ರವಾದ ಯಾಜಕದೀಕ್ಷಾವಸ್ತ್ರಗಳು ಅವನ ತರುವಾಯ ಅವನ ವಂಶಸ್ಥರಿಗೂ ಉಪಯೋಗವಾಗಬೇಕು. ಅವರು ಅದರಲ್ಲಿಯೇ ನನಗಾಗಿ ಅಭಿಷೇಕಿಸಿ ಪ್ರತಿಷ್ಠಿಸಬೇಕು.

ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಆರೋನನಿಗೆ ನಿಲುವಂಗಿಯನ್ನು ತೊಡಿಸಿ, ನಡುಕಟ್ಟನ್ನು ಸುತ್ತಿ, ಮೇಲಂಗಿಯನ್ನು ತೊಡಿಸಿ, ಏಫೋದ್ ಕವಚವನ್ನು ಹಾಕಿಸಿ, ಕವಚದ ಮೇಲೆ ಸೊಗಸಾಗಿ ನೇಯ್ದ ನಡುಕಟ್ಟನ್ನು ಕಟ್ಟಿದನು, ಅದರಿಂದ ಕವಚವನ್ನು ಅವನಿಗೆ ಹೊದಿಸಿದನು.

¶ ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರಿಗೆ, “ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸಾಯುವಿರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾಗುವುದು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲರ ಮನೆತನದವರೇ ದುಃಖಿಸಲಿ.

¶ “ಆರೋನನ ವಂಶದವರಲ್ಲಿ ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಸೇವಾವೃತ್ತಿಯನ್ನು ನಡೆಸುವುದಕ್ಕೆ ಪಟ್ಟಾಭಿಷೇಕವಾಗುವುದೋ ಅವನೇ ಈ ದೋಷಪರಿಹಾರ ಕಾರ್ಯವನ್ನು ಆಚರಿಸಬೇಕು. ಅವನೇ ಆ ಪರಿಶುದ್ಧವಾದ ನಾರುಮಡಿಗಳನ್ನು ಧರಿಸಿಕೊಳ್ಳಬೇಕು.

ಸಭೆಯು ಹತ್ಯಮಾಡಿದವನನ್ನು ಆ ಸಮೀಪ ಬಂಧುವಿನ ಕೈಯಿಂದ ತಪ್ಪಿಸಿ ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರುಗಿ ಸೇರಿಸಬೇಕು. ಪಟ್ಟಾಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.

¶ ಮೊರ್ದೆಕೈಯು ಹಿಂತಿರುಗಿ ಅರಮನೆಯ ಬಾಗಿಲಿಗೆ ಹೋದನು. ಹಾಮಾನನಾದರೋ ದುಃಖದಿಂದ ಮುಖವನ್ನು ಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಹೋಗಿ ತನ್ನ ಹೆಂಡತಿಯಾದ ಜೆರೆಷಳ ಮತ್ತು ಎಲ್ಲಾ ಆಪ್ತರ ಮುಂದೆ ತನಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದನು.

ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು, ಅವನ ಗಡ್ಡದ ಮೇಲೆಯೂ, ಅವನ ಅಂಗಿಗಳ ಕೊರಳ ಪಟ್ಟಿಯವರೆಗೂ ಹರಿದು ಬರುವ ಶ್ರೇಷ್ಠ ತೈಲದಂತೆಯೂ,