TSK

TSK · ಯಾಜಕಕಾಂಡ 21:11

مراجع Treasury of Scripture Knowledge في ಕನ್ನಡ IRV.

العودة إلى المقطع

¶ “‘ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವುದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಹಾಕಿಸಿಕೊಳ್ಳಬಾರದು. ನಾನು ಯೆಹೋವನು.

ತಾಯಿ, ತಂದೆ, ಅಣ್ಣ, ತಮ್ಮ, ಅಕ್ಕ, ತಂಗಿ ಇವರಲ್ಲಿ ಯಾರು ಸತ್ತರೂ ಅವರ ನಿಮಿತ್ತ ಅವನು ತನ್ನನ್ನು ದೇವರಿಂದ ಪ್ರತ್ಯೇಕಿಸಿ ಅಪವಿತ್ರಮಾಡಿಕೊಳ್ಳಬಾರದು. ಏಕೆಂದರೆ ತಾನು ದೇವರಿಗೆ ಮೀಸಲಾಗಿ ಬಿಟ್ಟ ಕೂದಲು ತಲೆಯ ಮೇಲೆ ಇದೆಯಲ್ಲಾ.

ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ‘ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ’ ಹೇಳಿಬಿಟ್ಟರಲ್ಲಾ.

¶ ಯೇಸು ಜನರ ಗುಂಪುಗಳ ಸಂಗಡ ಇನ್ನೂ ಮಾತನಾಡುತ್ತಿರುವಾಗ ಆತನ ತಾಯಿಯೂ ತಮ್ಮಂದಿರೂ ಆತನನ್ನು ಮಾತನಾಡಿಸಬೇಕೆಂದು ಹೊರಗೆ ಬಂದು ನಿಂತಿದ್ದರು.

‹“ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.›