TSK

TSK · ಯಾಜಕಕಾಂಡ 23:27

مراجع Treasury of Scripture Knowledge في ಕನ್ನಡ IRV.

العودة إلى المقطع

¶ “ಆರೋನನು ತನಗಾಗಿ ದೋಷಪರಿಹಾರಕ ಯಜ್ಞದ ಹೋರಿಯನ್ನು ಸಮರ್ಪಿಸಿ ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರವನ್ನು ಮಾಡಬೇಕು.

ಹೀಗೆ ಇಸ್ರಾಯೇಲರು ನಾನಾ ವಿಧವಾದ ಅಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೋಸ್ಕರವೂ ಅವನು ಹಾಗೆಯೇ ದೋಷಪರಿಹಾರ ಮಾಡುವನು.

¶ “ಸ್ವದೇಶಸ್ಥರಾದ ನೀವೂ ಮತ್ತು ನಿಮ್ಮಲ್ಲಿ ವಾಸವಾಗಿರುವ ಅನ್ಯದೇಶದವರು, ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನು ಬಿಟ್ಟು ಉಪವಾಸಮಾಡಿ ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು. ಇದು ನಿಮಗೆ ಶಾಶ್ವತವಾದ ನಿಯಮ.

¶ “‘ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಯಾವ ಕೆಲಸವನ್ನೂ ಮತ್ತು ಊಟವನ್ನು ಮಾಡದೆ ನಿಮ್ಮನ್ನು ತಗ್ಗಿಸಿಕೊಳ್ಳುವುದಕ್ಕಾಗಿ ದೇವಾರಾಧನೆಗಾಗಿ ಸಭೆಕೂಡಬೇಕು.

ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ.

ಆ ಕಾಲದಲ್ಲಿ ದಾನಿಯೇಲನಾದ ನಾನು ಮೂರು ವಾರ ಶೋಕಿಸುತ್ತಿದ್ದೆನು.

¶ ಅವರು ಇದನ್ನು ಕೇಳಿದಾಗ ಅವರ ಹೃದಯಗಳಲ್ಲಿ ಅಲಗು ನೆಟ್ಟಂತಾಯಿತು. ಅಲ್ಲದೆ ಅವರು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ, “ಸಹೋದರರೇ, ನಾವೇನು ಮಾಡಬೇಕು” ಎಂದು ಕೇಳಲು;

ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗುವನ್ನು ಬಿಟ್ಟು ಗೋಳಾಡಿರಿ. ಸಂತೋಷವನ್ನು ಬಿಟ್ಟು ಶೋಕಿಸಿರಿ.