TSK

TSK · ಯಾಜಕಕಾಂಡ 24:14

مراجع Treasury of Scripture Knowledge في ಕನ್ನಡ IRV.

العودة إلى المقطع

ಆ ರೋಗದ ಗುರುತುಗಳು ಅವನಲ್ಲಿ ಇರುವ ದಿನಗಳೆಲ್ಲಾ ಅವನು ಅಶುದ್ಧನಾಗಿರುವನು. ಅವನು ಅಶುದ್ಧನಾದುದರಿಂದ ಪ್ರತ್ಯೇಕವಾಗಿಯೇ ವಾಸವಾಗಿರಬೇಕು; ಅವನ ನಿವಾಸವು ಪಾಳೆಯದ ಹೊರಗೆ ಇರಬೇಕು.

¶ “‘ಸತ್ತವರಲ್ಲಿ ವಿಚಾರಿಸುವವರೂ, ಬೇತಾಳಿಕರೂ ಅವರು ಸ್ತ್ರೀಯರಾಗಲಿ ಅಥವಾ ಪುರುಷರಾಗಲಿ ಅವರು ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು, ಆ ಶಿಕ್ಷೆಗೆ ಅವರೇ ಕಾರಣರು’” ಎಂದು ಹೇಳಿದನು.

ತರುವಾಯ ಯೆಹೋವನು ಮೋಶೆಗೆ, “ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು; ಸರ್ವಸಮೂಹದವರ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು” ಎಂದು ಆಜ್ಞಾಪಿಸಿದನು.

ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.

ಅವಳು ತಂದೆಯ ಅಧೀನದಲ್ಲಿರುವಾಗಲ್ಲೇ ಪರಪುರುಷನೊಡನೆ ಸಂಪರ್ಕಮಾಡಿ ಇಸ್ರಾಯೇಲರೊಳಗೆ ದುರಾಚಾರವನ್ನು ನಡಿಸಿದ್ದರಿಂದ, ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ಕರೆಯಿಸಬೇಕು; ಊರಿನವರೆಲ್ಲರು ಅವಳನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ನಿವಾರಿಸಿಕೊಳ್ಳಬೇಕು.

ಅವನು ದೇವರನ್ನೂ ಮತ್ತು ಅರಸನನ್ನೂ ಶಪಿಸಿದನು ಎಂಬುದಾಗಿ ಇಬ್ಬರ ಸಾಕ್ಷಿ ಹೇಳಿಸಿ, ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ” ಎಂದು ಬರೆದಿದ್ದಳು.

¶ ಆಗ ಯೆಹೂದ್ಯರು ಆತನನ್ನು ಕೊಲ್ಲಬೇಕೆಂದು ತಿರುಗಿ ಕಲ್ಲುಗಳನ್ನು ತೆಗೆದುಕೊಂಡರು,