TSK

TSK · ಯಾಜಕಕಾಂಡ 24:4

مراجع Treasury of Scripture Knowledge في ಕನ್ನಡ IRV.

العودة إلى المقطع

¶ “ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿಸಬೇಕು. ಅದರ ಕೆಳಭಾಗವನ್ನು ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳು, ಅರಳಿದ ಪುಷ್ಪಗಳು ಮೊಗ್ಗುಗಳು ಅಲಂಕಾರವಾಗಿ ಕೆತ್ತಿರಬೇಕು.

ಮೇಜು ಅದರ ಉಪಕರಣಗಳು, ಚೊಕ್ಕ ಬಂಗಾರದ ದೀಪಸ್ತಂಭ ಅದರ ಉಪಕರಣಗಳು,

ಚೊಕ್ಕ ಬಂಗಾರದ ದೀಪಸ್ತಂಭವನ್ನು, ಅದರ ಮೇಲಿಡಬೇಕಾದ ಹಣತೆಗಳನ್ನು, ಅದರ ಉಪಕರಣಗಳನ್ನು, ದೀಪಕ್ಕೆ ಬೇಕಾದ ಎಣ್ಣೆಯನ್ನು,

ಆ ಮೇಲೆ ಅವರು ದೀಪಸ್ತಂಭವನ್ನೂ ಅದಕ್ಕೆ ಸಂಬಂಧಪಟ್ಟ ಹಣತೆಗಳನ್ನೂ, ಎಣ್ಣೆಯ ಪಾತ್ರೆಗಳನ್ನೂ

ಇದಲ್ಲದೆ ಆರಾಧನೆಯ ಆಯಾ ಆಚಾರಗಳಲ್ಲಿ ಉಪಯೋಗವಾಗಬೇಕಾದ ಎಲ್ಲಾ ಸಾಮಾನುಗಳ ಬೆಳ್ಳಿ ಬಂಗಾರದ ತೂಕ, ಅಂದರೆ ಬಂಗಾರದ ಹಣತೆಗಳಿರುವ ಬಂಗಾರದ ಪ್ರತಿಯೊಂದು ದೀಪಸ್ತಂಭದ ತೂಕ, ಬೇರೆ ಬೇರೆ ಕೆಲಸಗಳಿಗೆ ಉಪಯೋಗವಾಗುವ ಪ್ರತಿಯೊಂದು ಬೆಳ್ಳಿಯ ದೀಪಸ್ತಂಭದ ಮತ್ತು ಅದರ ಹಣತೆಗಳ ತೂಕ,

ಕಾವಲು ದಂಡಿನ ಅಧಿಪತಿಯು ಬೆಳ್ಳಿಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಧೂಪಾರತಿ, ತಾಂಬಾಣ ಮೊದಲಾದವುಗಳನ್ನು ತೆಗೆದುಕೊಂಡನು.

ಆಗ ನಾನು ದೇವದೂತನಿಗೆ, ದೀಪಸ್ತಂಭದ ಎಡಬಲದಲ್ಲಿರುವ ಈ ಎಣ್ಣೆಯ ಮರಗಳು ಏನು?” ಎಂದೆನು.

‹ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ. ಆ ಏಳು ನಕ್ಷತ್ರಗಳು ಅಂದರೆ ಏಳು ಸಭೆಗಳ›‹ದೂತರು, ಆ ಏಳು ದೀಪಸ್ತಂಭಗಳು ಅಂದರೆ›‹ಆ ಏಳು ಸಭೆಗಳು.” ›

ಭೂಲೋಕದ ಒಡೆಯನ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಮತ್ತು ಎರಡು ದೀಪಸ್ತಂಭಗಳೂ ಇವರೇ.