TSK

TSK · ಯಾಜಕಕಾಂಡ 25:38

مراجع Treasury of Scripture Knowledge في ಕನ್ನಡ IRV.

العودة إلى المقطع

ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.

ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಯೆಹೋವನು ನಾನೇ; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.

ನಿಮ್ಮ ದೇವರಾದ ಯೆಹೋವನು ನಾನೇ, ನಿಮ್ಮ ದೇವರಾಗುವುದಕ್ಕಾಗಿ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.”

ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.

ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.