ಆತನನ್ನು ಕೋಪಗೊಳಿಸಿದರೆ, ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ, ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಯಾಗಿಟ್ಟು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿನ ಇರದೆ ನಾಶವಾಗಿಯೇ ಹೋಗುವಿರಿ.
TSK
TSK · ಯಾಜಕಕಾಂಡ 26:38
مراجع Treasury of Scripture Knowledge في ಕನ್ನಡ IRV.
ನೀವು ಐಗುಪ್ತದೇಶವನ್ನು ತಿರುಗಿ ಎಂದಿಗೂ ನೋಡುವುದಿಲ್ಲವೆಂದು ಯೆಹೋವನು ಹೇಳಿದ್ದರೂ ಆತನು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರುಗಿ ಹೋಗ ಮಾಡುವನು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನು ದಾಸದಾಸಿಯರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವುದಿಲ್ಲ.
ಯೆರೆಮಿಯ 22:12
TSK
ಅವನನ್ನು ಎಲ್ಲಿಗೆ ಸೆರೆಯೊಯ್ದರೋ ಅಲ್ಲೇ ಸಾಯುವನು, ಈ ದೇಶವನ್ನು ಇನ್ನು ಕಾಣನು” ಎಂಬುದೇ.
ಯೆರೆಮಿಯ 42:22
TSK
ನೀವು ಯಾವ ಸ್ಥಳದಲ್ಲಿ ವಾಸಮಾಡಲು ಅಪೇಕ್ಷಿಸಿ ಹೋಗುತ್ತೀರೋ ಆ ಸ್ಥಳದಲ್ಲೇ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವಿರಿ ಎಂದು ಖಂಡಿತವಾಗಿ ತಿಳಿಯಿರಿ” ಎಂದು ಹೇಳಿದನು.
ಯೆರೆಮಿಯ 44:27
TSK
ಇಗೋ, ಇವರಿಗೆ ಮೇಲನ್ನಲ್ಲ, ಕೇಡನ್ನೇ ಮಾಡಬೇಕೆಂದು ಎಚ್ಚರಗೊಂಡಿದ್ದೇನೆ; ಐಗುಪ್ತದಲ್ಲಿನ ಎಲ್ಲಾ ಯೆಹೂದ್ಯರು ಖಡ್ಗ, ಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು.