TSK

TSK · ಯಾಜಕಕಾಂಡ 26:39

مراجع Treasury of Scripture Knowledge في ಕನ್ನಡ IRV.

العودة إلى المقطع

ಸಾವಿರಾರು ತಲೆಮಾರುಗಳವರೆಗೂ ದಯೆತೋರಿಸುವವನು; ದೋಷಾಪರಾಧ ಪಾಪಗಳನ್ನು ಕ್ಷಮಿಸುವವನು; ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡುವುದಿಲ್ಲ; ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಮಾರುಗಳವರೆಗೆ ಬರಮಾಡುವವನು ಆಗಿದ್ದಾನೆ” ಎಂಬುದೇ.

ಅವುಗಳಿಗೆ ಅಡ್ಡಬೀಳಲೂ ಬಾರದು, ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದ್ದರಿಂದ, ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ಪೂರ್ವಿಕರ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳ ವರೆಗೆ ಬರಮಾಡುವವನಾಗಿದ್ದೇನೆ.

ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವುದಿಲ್ಲ; ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ನೀವು ನಡುಗುವ ಹೃದಯವುಳ್ಳವರಾಗಿಯೂ, ದಿಕ್ಕುತೋರದೆ ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಂತೆ ಯೆಹೋವನು ಮಾಡುವನು.

ಯೆಹೋವನು ಹೇಳಿದ್ದೇನೆಂದರೆ, “ಈ ದೇಶದ ಮೇಲೆಯೂ, ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;

ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವುದಾದರೆ ನಿಮ್ಮ ಜನರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ, ನನ್ನ ನಾಮಸ್ಥಾಪನೆಗೋಸ್ಕರ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು’ ಎಂದು ಹೇಳಿರುವೆಯಲ್ಲಾ; ಆ ಮಾತನ್ನು ನೆನಪು ಮಾಡಿಕೊಳ್ಳಿರಿ.

ನಾವೇ ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ. ನಾವು ಮತ್ತು ನಮ್ಮ ಪೂರ್ವಿಕರೂ ಬಾಲ್ಯದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವನಿಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ. ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ” ಎಂದು ಮೊರೆಯಿಡುತ್ತಾರೆ.

‘ಹೆತ್ತವರು ಹುಳಿದ್ರಾಕ್ಷಿಯನ್ನು ತಿಂದರು, ಅದರಿಂದ ಮಕ್ಕಳ ಹಲ್ಲುಗಳು ಚಳಿತುಹೋಗಿವೆ’ ಎಂದು ಆ ಕಾಲದಲ್ಲಿ ಜನರು ಮತ್ತೆ ಹೇಳುವುದಿಲ್ಲ.

ಅವರಲ್ಲಿ ಪ್ರತಿಯೊಬ್ಬರೂ ಅನ್ನ ಮತ್ತು ನೀರಿನ ಕೊರತೆಯಿಂದ ಕುಗ್ಗಿ ತಮ್ಮ ಅಧರ್ಮದಿಂದ ನಾಶವಾಗಿ ಹೋಗುವರು.”

“ತಂದೆಗಳು ಹುಳಿ ದ್ರಾಕ್ಷಿಯನ್ನು ತಿಂದರು ಆದರೆ, ಮಕ್ಕಳ ಹಲ್ಲುಗಳು ಚಳಿತುಹೋಗಿವೆ ಎಂಬ ಗಾದೆಯನ್ನು ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಹೇಳುವುದೇಕೆ?”

ನೀವು ನಿಮ್ಮನ್ನು ಹೊಲಸು ಮಾಡಿಕೊಂಡಿರುವ ನಿಮ್ಮ ನಡತೆಯನ್ನೂ, ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ಜ್ಞಾಪಕಕ್ಕೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.

¶ “ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ‘ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಬದುಕುವೆವು? ಅಂದುಕೊಳ್ಳುತ್ತೀರಲ್ಲಾ.

ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ, ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೆ ನನ್ನನ್ನು ಆಶ್ರಯಿಸುವರು.

‹ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.›