ಹೀಗಿರುವುದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಇದಲ್ಲದೆ ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ಸುಲಭವಾಗಿ ಜಯಿಸಿಬಿಡುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ, ಯೆಹೋವನು ನಮ್ಮ ಸಂಗಡ ಇದ್ದಾನೆ. ಅವರಿಗೆ ಭಯಪಡಬೇಡಿರಿ” ಎಂದರು.
TSK
TSK · ಯಾಜಕಕಾಂಡ 26:8
مراجع Treasury of Scripture Knowledge في ಕನ್ನಡ IRV.
¶ ನಿಮ್ಮ ವಿರುದ್ಧವಾಗಿ ಬರುವ ಶತ್ರುಗಳು ನಿಮ್ಮಿಂದ ಸೋತುಹೋಗುವಂತೆ ಯೆಹೋವನು ಮಾಡುವನು; ಅವರು ಒಂದೇ ದಾರಿಯಿಂದ ನಿಮ್ಮ ವಿರುದ್ಧವಾಗಿ ಬಂದರೂ ಏಳು ದಾರಿಗಳಿಂದ ಓಡಿಹೋಗುವರು.
ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನದಂತೆ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು.
ಅಲ್ಲಿ ಒಂದು ಕತ್ತೆಯ ದವಡೇ ಎಲುಬು ಬಿದ್ದಿತ್ತು. ಅದು ಇನ್ನೂ ಹಸಿದಾಗಿತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಸಂಹರಿಸಿಬಿಟ್ಟು,
ಯೋನಾತಾನನೂ ಅವನ ಆಯುಧಗಳನ್ನು ಹೊರುವ ಸೇವಕನೂ ತಮ್ಮ ಕೈ ಮತ್ತು ಮೊಣಕಾಲುಗಳ ಸಹಾಯದಿಂದ ಗಟ್ಟಾ ಹತ್ತಿದರು; ಯೋನಾತಾನನು ಫಿಲಿಷ್ಟಿಯರನ್ನು ನೆಲಕ್ಕುರುಳಿಸುತ್ತಾ ಹೋದನು. ಅವನ ಸೇವಕನು ಹಿಂದಿನಿಂದ ಅವರನ್ನು ಕೊಲ್ಲುತ್ತಾ ಹೋದನು.
ದಾವೀದನ ಯುದ್ಧವೀರರ ಪಟ್ಟಿ: ಹಕ್ಮೋನಿಯನಾದ ಯಾಷೊಬ್ಬಾಮನು ಮೂವತ್ತು ಶೂರರಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಒಂದೇ ಸಾರಿ ಮುನ್ನೂರು ಜನರನ್ನು ಕೊಂದನು.
ನಾನು ಅವರ ಎದುರಾಳಿಗಳ ಮೇಲೆ ಕೈಯೆತ್ತಿ, ಅವರ ಶತ್ರುಗಳನ್ನು ಸುಲಭವಾಗಿ ಬಗ್ಗಿಸುವೆನು.