ವಿಮೋಚನಕಾಂಡ 13:2
TSK
“ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಪ್ರತಿಷ್ಠಿಸಬೇಕು. ಮನುಷ್ಯರಲ್ಲಾಗಲೀ, ಪಶುಗಳಲ್ಲಾಗಲೀ ಹುಟ್ಟುವ ಪ್ರಥಮ ಗರ್ಭಫಲವು ನನ್ನದಾಗಿದೆ” ಎಂದು ಹೇಳಿದನು.
TSK
مراجع Treasury of Scripture Knowledge في ಕನ್ನಡ IRV.
“ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಪ್ರತಿಷ್ಠಿಸಬೇಕು. ಮನುಷ್ಯರಲ್ಲಾಗಲೀ, ಪಶುಗಳಲ್ಲಾಗಲೀ ಹುಟ್ಟುವ ಪ್ರಥಮ ಗರ್ಭಫಲವು ನನ್ನದಾಗಿದೆ” ಎಂದು ಹೇಳಿದನು.
ಅದರಂತೆಯೇ ನಿಮ್ಮ ಕುರಿ, ದನಗಳ ಚೊಚ್ಚಲು ಮರಿಗಳನ್ನು ನನಗೆ ಸಮರ್ಪಿಸಬೇಕು. ಏಳು ದಿನಗಳ ಕಾಲ ಆ ಮರಿ ತನ್ನ ತಾಯಿಯೊಂದಿಗಿರಲಿ. ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.
¶ ದನಗಳಲ್ಲಿಯೂ ಮತ್ತು ಆಡುಕುರಿಗಳಲ್ಲಿಯೂ ಚೊಚ್ಚಲಾದ ಗಂಡನ್ನು ನಿಮ್ಮ ದೇವರಾದ ಯೆಹೋವನಿಗಾಗಿ ಪ್ರತಿಷ್ಠಿಸಬೇಕು. ಚೊಚ್ಚಲಾದ ಹೋರಿಯಿಂದ ಕೆಲಸಮಾಡಿಸಬಾರದು; ಚೊಚ್ಚಲಾದ ಕುರಿಯ ಉಣ್ಣೆಯನ್ನು ಕತ್ತರಿಸಬಾರದು.
ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ, ನಮ್ಮ ಪಶುಗಳ ಹಿಂಡುಗಳಲ್ಲಿ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಡೆದುಕೊಳ್ಳುವೆವು. ನಮ್ಮ ಚೊಚ್ಚಲ ಕರುಗಳನ್ನೂ, ಚೊಚ್ಚಲ ಆಡು, ಕುರಿಮರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಕೆಲಸ ನಡೆಸುತ್ತಿರುವ ಯಾಜಕರಿಗೆ ಕೊಡುವೆವು.