TSK

TSK · ಯಾಜಕಕಾಂಡ 3:2

مراجع Treasury of Scripture Knowledge في ಕನ್ನಡ IRV.

العودة إلى المقطع

¶ ತರುವಾಯ ನೀನು ಆ ಟಗರುಗಳಲ್ಲಿ ಒಂದನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.

ಅವನು ಆ ಯಜ್ಞ ಪಶುವಿನ ತಲೆಯ ಮೇಲೆ ಕೈಯಿಡಬೇಕು; ಆಗ ಅದು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದಕ್ಕಾಗಿ ಅಂಗೀಕಾರವಾಗುವುದು.

ಅದನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಉತ್ತರ ಭಾಗದಲ್ಲಿ ವಧಿಸಬೇಕು. ತರುವಾಯ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಹಾಕಬೇಕು.

ಅವನು ಅದರ ತಲೆಯ ಮೇಲೆ ಎರಡು ಕೈಗಳನ್ನು ಇಟ್ಟು, ಇಸ್ರಾಯೇಲರ ಎಲ್ಲಾ ಪಾಪಗಳನ್ನು, ದ್ರೋಹಗಳನ್ನು ಮತ್ತು ಅಪರಾಧಗಳನ್ನು ಯೆಹೋವನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ, ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಅರಣ್ಯಕ್ಕೆ ಕಳುಹಿಸಿಬಿಡಬೇಕು.

ಅದನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ಆತನ ಗುಡಾರದ ಬಾಗಿಲಿಗೆ ತಾರದೆ, ಪಾಳೆಯದ ಒಳಗಾಗಲಿ ಅಥವಾ ಹೊರಗಾಗಲಿ ವಧಿಸಿದರೆ ಅವನನ್ನು ಕೊಲೆಪಾತಕನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.

ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.

¶ “ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು.

ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಪ್ರತಿಷ್ಠೆಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ” ಎಂದು ಹೇಳಿದನು.

ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಲೋಕದ ರಾಜರು, ಸನ್ನದ್ಧರಾಗಿ ನಿಂತರು, ಅಧಿಕಾರಿಗಳು ಒಟ್ಟಾಗಿ ಕೂಡಿಕೊಂಡರು’ ಎಂದು ಹೇಳಿಸಿದಿಯಲ್ಲವೇ?

ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.