ಯಾಜಕಕಾಂಡ 4:6
TSK
ಯಾಜಕನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಮಹಾಪವಿತ್ರಸ್ಥಾನದ ಮುಂದಿನ ತೆರೆಯ ಎದುರಾಗಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮುಕಿಸಬೇಕು.
TSK
مراجع Treasury of Scripture Knowledge في ಕನ್ನಡ IRV.
ಯಾಜಕನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಮಹಾಪವಿತ್ರಸ್ಥಾನದ ಮುಂದಿನ ತೆರೆಯ ಎದುರಾಗಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮುಕಿಸಬೇಕು.
ಆಮೇಲೆ ಅವನು ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ, ಅವನನ್ನು ಶುದ್ಧನೆಂದು ನಿರ್ಣಯಿಸಿ, ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.
ತರುವಾಯ ಯಾಜಕನಾದ ಎಲ್ಲಾಜಾರನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ದೇವದರ್ಶನದ ಗುಡಾರದ ಮುಂಭಾಗದ ಕಡೆಗೆ ಏಳು ಸಾರಿ ಚಿಮಿಕಿಸಬೇಕು.