TSK

TSK · ಯಾಜಕಕಾಂಡ 4:22

مراجع Treasury of Scripture Knowledge في ಕನ್ನಡ IRV.

العودة إلى المقطع

“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ ‘ಯಾರೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಿಯಾದರೆ ಅವನಿಗೆ ದೋಷಪರಿಹಾರ ಮಾಡಿಕೊಳ್ಳುವ ಕ್ರಮ ಹೀಗಿದೆ.

¶ “‘ನಿಮ್ಮ ದೇಶದ ಜನರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,

ನಾನು ಮೋಶೆಗೆ ಹೇಳಿದ ಈ ಎಲ್ಲಾ ಆಜ್ಞೆಗಳಿಗೆ ನೀವು ವಿಧೇಯರಾಗಿರದಿದ್ದರೆ,

¶ ಮೋಶೆಯೂ, ಮಹಾಯಾಜಕನಾದ ಎಲ್ಲಾಜಾರನೂ, ಸಮೂಹದ ಪ್ರಧಾನರೂ ಪಾಳೆಯದ ಹೊರಗೆ ಹೋಗಿ ಅವರನ್ನು ಎದುರುಗೊಂಡರು.

¶ ಜನಗಣತಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚತೊಡಗಿತು. ಆದುದರಿಂದ ಅವನು ಯೆಹೋವನನ್ನು, “ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ಪ್ರಾರ್ಥಿಸಿದನು.