TSK

TSK · ಯಾಜಕಕಾಂಡ 4:32

مراجع Treasury of Scripture Knowledge في ಕನ್ನಡ IRV.

العودة إلى المقطع

ಇದರ ವಿಷಯದಲ್ಲಿ ನೀವು ಇಸ್ರಾಯೇಲರ ಸಮೂಹಕ್ಕೆಲ್ಲಾ ಹೀಗೆ ಅಪ್ಪಣೆಮಾಡಬೇಕು, ‘ಈ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ತೆಗೆದುಕೊಳ್ಳಬೇಕು.

¶ “‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.

ತನ್ನ ತಪ್ಪು ತನಗೆ ತಿಳಿದುಬಂದಾಗ ಆ ದೋಷಪರಿಹಾರಕ್ಕಾಗಿ ಪೂರ್ಣಾಂಗವಾದ ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.

ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ.

¶ ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.

ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.

ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?

ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.

ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.

ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.