TSK

TSK · ಯಾಜಕಕಾಂಡ 4:6

مراجع Treasury of Scripture Knowledge في ಕನ್ನಡ IRV.

العودة إلى المقطع

ಅದರಲ್ಲಿ ಬೆರಳನ್ನು ಅದ್ದಿ, ತೆರೆಯ ಮುಂದೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ಏಳು ಸಾರಿ ಚಿಮುಕಿಸಬೇಕು.

ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.

ಯಜ್ಞವೇದಿಯ ಮೇಲೆ ಏಳು ಸಾರಿ ಆ ತೈಲವನ್ನು ಚಿಮುಕಿಸಿ, ಯಜ್ಞವೇದಿಯನ್ನು ಅದರ ಎಲ್ಲಾ ಉಪಕರಣಗಳನ್ನು, ಬೋಗುಣಿಯನ್ನು ಅದರ ಪೀಠವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.

ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಹೊಯ್ದುಬಿಟ್ಟನು.

ತನ್ನ ಬಲಗೈಯ ಬೆರಳನ್ನು ಅದರಲ್ಲಿ ಅದ್ದಿ, ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಬೆರಳಿನಿಂದ ಚಿಮುಕಿಸಬೇಕು.

ಅದರಲ್ಲಿ ಸ್ವಲ್ಪವನ್ನು ಬಲಗೈಯ ಬೆರಳಿನಿಂದ ಏಳು ಸಾರಿ ಯೆಹೋವನ ಸನ್ನಿಧಿಯಲ್ಲಿ ಚಿಮುಕಿಸಬೇಕು.

ಅವನು ಆ ರಕ್ತದಲ್ಲಿ ಸ್ವಲ್ಪವನ್ನು ಅದರ ಮೇಲೆ ಏಳು ಸಾರಿ ಬೆರಳಿನಿಂದ ಚಿಮುಕಿಸಿ ಇಸ್ರಾಯೇಲರಿಂದ ಅದಕ್ಕೆ ಉಂಟಾದ ಅಶುದ್ಧತ್ವವನ್ನು ಹೋಗಲಾಡಿಸಿ ಅದನ್ನು ಪರಿಶುದ್ಧಪಡಿಸಬೇಕು.

¶ “ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಕೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ನಿಮ್ಮನ್ನು ಶಿಕ್ಷಿಸುವೆನು.

ನಾನು ನಿಮ್ಮ ಮೇಲೆ ಕೋಪಗೊಂಡವನಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ಶಿಕ್ಷಿಸುವೆನು.

ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿನ ನೀವು ಪಟ್ಟಣವನ್ನು ಏಳು ಸಾರಿ ಸುತ್ತಬೇಕು; ಯಾಜಕರು ಕೊಂಬುಗಳನ್ನು ಊದಬೇಕು.