TSK

TSK · ಯಾಜಕಕಾಂಡ 6:11

مراجع Treasury of Scripture Knowledge في ಕನ್ನಡ IRV.

العودة إلى المقطع

ಕರುಳುಗಳು, ಕರುಳುಗಳಲ್ಲಿರುವ ಕಲ್ಮಷ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ಯಜ್ಞವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.

“ಆರೋನನಿಗೆ ಅಭಿಷೇಕವಾದ ದಿನ ಮೊದಲುಗೊಂಡು ಅವನೂ ಮತ್ತು ಅವನ ವಂಶದವರೂ ಯೆಹೋವನಿಗೆ ಸಮರ್ಪಿಸಬೇಕಾದ ಧಾನ್ಯ ನೈವೇದ್ಯ ಕ್ರಮ ಹೇಗೆಂದರೆ, ಅವರು ನಿತ್ಯವೂ ಮೂರು ಸೇರು ಗೋದಿಹಿಟ್ಟನ್ನು, ಹೊತ್ತಾರೆ ಅರ್ಧವನ್ನು ಹಾಗೂ ಸಾಯಂಕಾಲ ಅರ್ಧವನ್ನು ಸಮರ್ಪಿಸಬೇಕು.

ಹೋಮಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರೂ ತಿನ್ನಬಹುದು; ಅದು ಮಹಾಪರಿಶುದ್ಧವಾದುದರಿಂದ ಪವಿತ್ರಸ್ಥಳದೊಳಗೆ ಅದನ್ನು ತಿನ್ನಬೇಕು.

¶ “ತರುವಾಯ ಆರೋನನು ದೇವದರ್ಶನದ ಗುಡಾರದೊಳಗೆ ಬಂದು ತಾನು ಮಹಾಪವಿತ್ರಸ್ಥಾನದೊಳಗೆ ಹೋಗುವುದಕ್ಕಾಗಿ ಧರಿಸಿಕೊಂಡಿದ್ದ ನಾರುಮಡಿಗಳನ್ನು ತೆಗೆದು ಅಲ್ಲೇ ಇಡಬೇಕು.

ಅವು ಆರೋನನಿಗೂ ಮತ್ತು ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಅವುಗಳನ್ನು ದೇವಸ್ಥಾನದ ಪ್ರಾಕಾರದಲ್ಲಿಯೇ ತಿನ್ನಬೇಕು. ಅವು ಯೆಹೋವನಿಗೆ ಸಮರ್ಪಿತವಾದ ಹೋಮದ್ರವ್ಯಗಳಿಗೆ ಸೇರಿದವುಗಳಾದುದರಿಂದ ಶಾಶ್ವತನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು” ಅಂದನು.

ಮಹಾಯಾಜಕನು ದೋಷಪರಿಹಾರಕ ಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗುತ್ತಾನೆ, ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲ.