ಹೀಗೆ ಏಳು ದಿನಗಳವರೆಗೂ ಯಜ್ಞವೇದಿಯ ನಿಮಿತ್ತವಾಗಿ ದೋಷಪರಿಹಾರಕ ಆಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಬೇಕು. ಯಜ್ಞವೇದಿಯು ಅತಿ ಪರಿಶುದ್ಧವಾಗಿರಬೇಕು. ಯಜ್ಞವೇದಿಯನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು.
TSK
TSK · ಯಾಜಕಕಾಂಡ 6:27
مراجع Treasury of Scripture Knowledge في ಕನ್ನಡ IRV.
ಆರೋನನ ವಂಶದವರಾದ ಗಂಡಸರೆಲ್ಲರೂ ಅದನ್ನು ತಿನ್ನಬಹುದು. ಯೆಹೋವನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸಲ್ಲತಕ್ಕದ್ದೆಂಬುದು ಶಾಶ್ವತನಿಯಮ. ಆ ದ್ರವ್ಯಗಳಿಗೆ ತಗಲಿದ್ದೆಲ್ಲಾ ಪರಿಶುದ್ಧವಾಗುವುದು’” ಎಂದು ಹೇಳಿದನು.
ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ ಇಲ್ಲವೆ ಗುಗ್ಗರಿಯನ್ನಾಗಲಿ ಅಥವಾ ದ್ರಾಕ್ಷಾರಸವನ್ನಾಗಲಿ ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರ ಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವುದೋ? ಎಂದು ಧರ್ಮವಿಧಿಯನ್ನು ವಿಚಾರಿಸು” ಪ್ರವಾದಿಯು ಹಾಗೆ ವಿಚಾರಿಸಲು ಯಾಜಕರು “ಇಲ್ಲ” ಎಂದು ಉತ್ತರಕೊಟ್ಟರು.
ಅವರು ಆತನನ್ನು ನಿನ್ನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು, ಮತ್ತು ಮುಟ್ಟಿದವರೆಲ್ಲರು ಸ್ವಸ್ಥರಾದರು.
ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮ್ಮಲ್ಲಿ ಎಂಥ ಶ್ರದ್ದೆಯನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸಾಬೀತುಪಡಿಸುವುದಕ್ಕೆ ಎಂಥ ಪ್ರಯಾಸ, ಎಂಥ ರೋಷ; ಎಂಥ ಭಯ; ಎಂಥ ಹಂಬಲ; ಎಂಥ ಉತ್ಸಾಹ; ತಪ್ಪಿತಸ್ಥರನ್ನು ಶಿಕ್ಷಿಸಲು ಎಂಥ ಬಯಕೆ. ನೀವು ಆ ಕಾರ್ಯದಲ್ಲಿ ನಿರ್ದೋಷಿಗಳೆಂದು ಎಲ್ಲಾ ವಿಧದಲ್ಲಿಯೂ ತೋರಿಸಿದ್ದೀರಿ.